ಭೂ ಪರಿವರ್ತನೆ ಅನುಮತಿ ರದ್ದುಪಡಿಸಬೇಕೆಂದು ಮನವಿ
Request to cancel land conversion permission
ವಿಜಯಪುರ, 27 : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಡೋಣಿ ನದಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಭೂ ಪರಿವರ್ತನೆ ಮಾಡಲು ನೀಡಿರುವ ಅನುಮತಿಗಳನ್ನು ತಕ್ಷಣವೇ ರದ್ದುಪಡಿಸಲು ಒತ್ತಾಯಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘ (ರಿ) ವತಿಯಿಂದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಅರವಿಂದ ಕುಲಕರ್ಣಿ ಹಾಗೂ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಡೋಣಿ ನದಿ ಪ್ರವಾಹ ಪೀಡಿತ ಪ್ರದೇಶವೆಂದು ಘೋಷಿಸಿ ಪುನರ್ವಸತಿ ಕಲ್ಪಿಸಲು ಗ್ರಾಮದ ಜನರು ಸರ್ಕಾರಕ್ಕೆ ಹಲವಾರು ದಿನಗಳಿಂದ ಒತ್ತಾಯ ಮಾಡುತ್ತಾ ಬಂದಿದ್ದು ಇರುತ್ತದೆ. ಸದರಿ ವಿಷಯ ಸರ್ಕಾರದ ಗಮನದಲ್ಲಿದ್ದರೂ ಕೂಡ ಡೋಣಿ ಪ್ರವಾಹ ಪೀಡಿತ ಪ್ರದೇಶದಲ್ಲಿ ವಸತಿ ಉದ್ದೇಶಕ್ಕಾಗಿ ಜಮೀನುಗಳನ್ನು ಭೂ ಪರಿವರ್ತನೆ ಮಾಡಲು ಜಿಲ್ಲಾಡಳಿತದಿಂದ ಅನುಮತಿ ನೀಡಿದ್ದು ಇರುತ್ತದೆ. ಇದು ಖಂಡನೀಯ. ಸಾರ್ವಜನಿಕರ ಜೊತೆ ಜಿಲ್ಲಾಡಳಿತ ಚೆಲ್ಲಾಟವಾಡುತ್ತಿರುವುದು ಶೋಚನೀಯ ವಿಷಯ.
ವಿಜಯಪುರ ಜಿಲ್ಲಾಡಳಿತದಿಂದ ಡೋಣಿ ಪ್ರವಾಹ ಪೀಡಿತ ಸಾರವಾಡ ಗ್ರಾಮದ ರಿ.ಸ.ನಂ. 613/ಎ ಮತ್ತು 613/ಬಿ ಸೇರಿದಂತೆ ಗ್ರಾಮದ ಪ್ರವಾಹ ಪೀಡಿತ ಎಲ್ಲ ಜಮೀನುಗಳಿಗೆ ನೀಡಿದ ಭೂ ಪರಿವರ್ತನೆ ಅನುಮತಿಯನ್ನು ಕೂಡಲೇ ರದ್ದುಪಡಿಸಿ ಮುಂದೆ ಆಗುವ ಅನಾಹುತಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ತಾವು ನೀಡಿರುವ ಅನುಮತಿಯನ್ನು ರದ್ದುಪಡಿಸದೇ ಹೋದಲ್ಲಿ ಮುಂದೆ ಸಾರ್ವಜನಿಕರಿಗೆ ಆಗುವ ಜೀವ ಹಾನಿ ಆಸ್ತಿ ಪಾಸ್ತಿ ನಷ್ಟಕ್ಕೆ ಅನುಮತಿ ನೀಡಿದ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ. ಆದ ಕಾರಣ ಸಾರ್ವಜನಿಕರ ಜೀವ ಆಸ್ತಿ ಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಭೂ ಪರಿವರ್ತನೆಯ ಅನುಮತಿಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 