ಇ-ಖಾತಾ ಪಡೆಯಲು ಅಗತ್ಯ ದಾಖಲೆ ಪೂರೈಸಲು ಮನವಿ
Request to complete the necessary documents to obtain e-account
ದೇವರಹಿಪ್ಪರಗಿ 17: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾತೆದಾರರು ಇ-ಖಾತಾ ಪಡೆಯಲು ನಿರಾಸಕ್ತಿ ತೋರುತ್ತಿದ್ದು, ಇದರಿಂದ ನೀರಿಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲು ಸಾದ್ಯವಾಗುತ್ತಿಲ್ಲ.ಈಗಾಗಲೇ ಸರ್ಕಾರವು ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡಲು ಆದೇಶ ನೀಡಿರುವ ಪ್ರಕಾರ ಪಟ್ಟಣ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರವನ್ನು ಕೈಗೊಂಡು ಬಿ-ಖಾತಾವನ್ನು ನೀಡಲು ಅಭಿಯಾನ ಹಮ್ಮಿಕೊಂಡಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಳಾದ ಸುರೇಖಾ ಬಾಗಲಕೋಟ ತಿಳಿಸಿದ್ದಾರೆ.
ಖಾತೆದಾರರು ಕೇವಲ ಅರ್ಜಿ ಮಾತ್ರ ಸಲ್ಲಿಸಿ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸದೇ ಇರುವುದರಿಂದ ಇ-ಖಾತಾ ನೀಡಲು ಸಾಧ್ಯವಾಗುತ್ತಿಲ್ಲ. ದೂರವಾಣಿ ಮೂಲಕ ಸಿಬ್ಬಂದಿ ಸಂಪರ್ಕಿಸಿದರೂ ಸಹ ಸಾರ್ವಜನಿಕರು ದಾಖಲಾತಿಗಳನ್ನು ಪೂರೈಸದೇ ಇರುವುದರಿಂದ ಸಿಬ್ಬಂದಿ ಮನೆ ಮನೆಗೆ ತೆರಳಿ ದಾಖಲೆಗಳನ್ನು ಸಂಗ್ರಹಿಸುವ ಕಾರ್ಯ ಆರಂಬಿಸಿದ್ದಾರೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸಾರ್ವಜನಿಕರಲ್ಲಿ ಪ್ರಕಟಣೆಯ ಮೂಲಕ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 