ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಮನವಿ
Request to extradite Sheikh Hasina to Bangladesh
ಢಾಕಾ 23: ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ ವಾಪಸ್ ಕಳುಹಿಸುವಂತೆ ಕೋರಿ ಭಾರತಕ್ಕೆ ರಾಜತಾಂತ್ರಿಕ ಪತ್ರವನ್ನು ಕಳುಹಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ತಿಳಿಸಿದೆ.
ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ 77 ವರ್ಷದ ಹಸೀನಾ ಅವರು ಆಗಸ್ಟ್ 5 ರಂದು ದೇಶವನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿದ್ದರು. ಪ್ರತಿಭಟನೆಯಲ್ಲಿ ಉಂಟಾದ ಹಿಂಸಾಚಾರಾಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು ಹಸೀನಾ ಸೇರಿದಂತೆ ಹಲವಾರು ಮಾಜಿ ಸಚಿವರು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳ ವಿರುದ್ದ ಪ್ರಕರಣಗಳನ್ನು ದಾಖಲಿಸಿದ್ದು, ಬಂಧನ ವಾರಂಟ್‌ಗಳನ್ನು ಹೊರಡಿಸಿದೆ.
ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿ ಶೇಖ್ ಹಸೀನಾ ಅವರು ಢಾಕಾಗೆ ಮರಳಬೇಕು ಎಂದು ಬಾಂಗ್ಲಾದೇಶವು ಬಯಸುತ್ತದೆ. ಹೀಗಾಗಿ, ನಾವು ಭಾರತ ಸರ್ಕಾರಕ್ಕೆ ರಾಜತಾಂತ್ರಿಕ ಸಂದೇಶ ಕಳುಹಿಸಿದ್ದೇವೆ ಎಂದು ವಿದೇಶಾಂಗ ಸಚಿವ ತೌಹಿದ್ ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 