ಬಂಜಾರ ಸಮಾಜ ಸಮುದಾಯ ಭವನಕ್ಕೆ ಜಾಗೆ ನೀಡಲು ಮನವಿ
Request to give space to Banjara Samaj Community Bhawan
ಬೆಳಗಾವಿ 09: ಬಂಜಾರ ಸಮಾಜಕ್ಕೆ ಸಮುದಾಯ ಭವನ ನಿರ್ಮಾಣಕ್ಕೆ ಜಾಗೆ ಮಂಜೂರ ಮಾಡುವಂತೆ ಬೆಳಗಾವಿ ಜಿಲ್ಲಾ ಬಂಜಾರ ಜನ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬೆಂಗಳೂರುನಲ್ಲಿ ಮನವಿ ಸಲ್ಲಿಸಿದರು.
ಬೆಳಗಾವಿ ಮಹಾನಗರದಲ್ಲಿ ಬಂಜಾರ ಸಮಾಜದ ಸಾವಿರಾರು ಜನರು ವಾಸವಿದ್ದಾರೆ. ನಮ್ಮ ಸಮಾಜವು ಆರ್ಥಿಕವಾಗಿ ಹಿಂದುಳಿದಿದೆ. ಸಮಾಜದ ಜನರಿಗೆ ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ನಮ್ಮದೇ ಆದ ಸಮುದಾಯ ಭವನದ ಅವಶ್ಯಕತೆಯಿದೆ. ಆದ್ದರಿಂದ ಬೆಳಗಾವಿ ಮಹಾನಗರದ ಸುತ್ತಮುತ್ತ ಇರುವ ಸರಕಾರಿ ಜಾಗೆಯಲ್ಲಿ 1 ಎಕರೆಯಷ್ಟಾದರೂ ಜಾಗೆಯನ್ನು ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಪದಾಧಿಕಾರಿಗಳು ಸಮಾಜದ ಪರವಾಗಿ ವಿನಂತಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯಕ್, ಜಿಲ್ಲಾಧ್ಯಕ್ಷ ಎಂ.ಟಿ.ರಾಠೋಡ, ಕಾರ್ಯಾಧ್ಯಕ್ಷ ಕೃಷ್ಣಾ ರಾಠೋಡ ಸೇರಿದಂತೆ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 