ಸಮೀಕ್ಷೆದಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಮನವಿ

ಸಮೀಕ್ಷೆದಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಮನವಿ  Request to provide solutions to the problems faced by surveyors

ಲಕ್ಷ್ಮೇಶ್ವರ 06: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ರೈತರ ಜಮೀನುಗಳಿಗೆ ತೆರಳಿ ಬೆಳೆಗಳ ಸಮೀಕ್ಷೆ ನಡೆಸುತ್ತಿರುವ ಸಮೀಕ್ಷೆದಾರರು ಮೂಲಸೌಕರ್ಯ ಮತ್ತು ಅಗತ್ಯ ಸೌಲಭ್ಯಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.  

ಸಮೀಕ್ಷೆ ಕಾರ್ಯ ನಿರ್ವಹಿಸುವ ವೇಳೆ ಸಮೀಕ್ಷೆದಾರರಿಗೆ ಅಗತ್ಯ ಸೌಲಭ್ಯಗಳು ಹಾಗೂ ಭದ್ರತಾ ವ್ಯವಸ್ಥೆ ಇಲ್ಲದಿರುವುದರಿಂದ ಕಾರ್ಯನಿರ್ವಹಿಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಸಮೀಕ್ಷೆ ಕಾರ್ಯ ಸುಗಮವಾಗಿ ನಡೆಯಲು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.  

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸಮೀಕ್ಷೆದಾರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ನೀಲೂರೋಟಿ, ಲಕ್ಷ್ಮೇಶ್ವರ ತಾಲೂಕು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಸಮೀಕ್ಷೆದಾರರು ಉಪಸ್ಥಿತರಿದ್ದರು.