ಗದಗ: ಇಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ವೆಂಕಟೇಶಯ್ಯನವರ ಅಧ್ಯಕ್ಷತೆಯಲ್ಲಿ ಮಾರ್ಚ 4ರಂದು ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯ 7ಡಿ ಸೆಕ್ಷನ್ ರದ್ದುಪಡಿಸಿದಂತೆ 7ಸಿಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಿಸಲು ರಾಜ್ಯ ಸಮಿತಿ ಕರೆಯಮೇರೆಗೆ ಗದಗ ಜಿಲ್ಲಾ ಡಿ.ಎಸ್.ಎಸ್ (ಗುರುಪ್ರಸಾದ ಕೇರಗೊಡ) ದಿಂದ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಸಂಚಾಲಕರಾದ ವೆಂಕಟೇಶಯ್ಯನವರು ಹೇಳಿದರು.
ಅವರು ಮಾರ್ಚ 4ರಂದು ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯ 7ಡಿ ಸೆಕ್ಷನ್ ರದ್ದುಪಡಿಸಿದಂತೆ 7ಸಿ ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ದಲಿತ ಸಂಘರ್ಷ ಸಮಿತಿ ಚಳವಳಿಯ ಒತ್ತಾಸೆಯಿಂದಾಗಿ 2013-14 ರಲ್ಲಿ ಸಿದ್ಧರಾಮಯ್ಯನವರ ಸರ್ಕಾರವೇ ಜಾರಿಗೆ ತಂದ ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯ ಕಾಯ್ದೆಯು ತನ್ನ ಪರಿಭಾಷೆಯಲ್ಲಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಎಂಬುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿರುವ ಯೋಜನೆ ಎನ್ನುತ್ತದೆ. ಅದರಲ್ಲಿಯೇ ಅಭಿವೃದ್ಧಿಯ ಅಂತರ ಎಂದರೆ ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ ರಾಜ್ಯ ಸರಾಸರಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎಂದು ವ್ಯಾಖ್ಯಾನಿಸುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (ದಲಿತರು) ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ.
ಕರ್ನಾಟಕ ಮಾನವ ಅಭಿವೃದ್ಧಿ ವರದಿ 2015ರ ಪ್ರಕಾರ ಇತರೆ ಸಮುದಾಯಗಳಿಗೆ ಹೋಲಿಸಿಕೊಂಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ರಾಜ್ಯದ ಸರಾಸರಿ ಅಭಿವೃದ್ಧಿಗಿಂತಲೂ ದಲಿತರು ಕಡಿಮೆ ಅಭಿವೃದ್ಧಿ ಹೊಂದಿರುವುದು ಕಂಡುಬಂದಿದೆ. ಹೀಗಿರುವಾಗ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯು ದಲಿತರಿಗೆ ಮೀಸಲಿಡುವ ಹಣವನ್ನು ಅಸಮಾನತೆಯ ಅಂತರವನ್ನು ಕಡಿಮೆ ಮಾಡುವ ಯೋಜನೆಗಳಲ್ಲಿ ವಿನಿಯೋಗಿಸಬೇಕೇ ಹೊರತು ಎಲ್ಲರ ಅಭಿವೃದ್ಧಿಗೆ ರೂಪಿಸುವ ಯೋಜನೆಗಳಲ್ಲಿ ಅಲ್ಲ.
2023-24ನೇ ಸಾಲಿನಿಂದಲೂ ಸುಮಾರು ರೂ. 25000 ಕೋಟಿಯನ್ನು ಗ್ಯಾರಂಟಿಗಳಿಗೂ, ರೂ. 15000 ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದಂತೆ ಆಗುತ್ತದೆ. ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್ ಸರ್ಕಾರ ಕೂಡ ಮಾಡಿದಂತಾಗಿದೆ. ಅದಷ್ಟೇ ಅಲ್ಲದೆ ಸರ್ಕಾರ, ಮುಖ್ಯ ಮಂತ್ರಿಗಳು, ಸಮಾಜ ಕಲ್ಯಾಣ ಸಚಿವರೂ ಸೇರಿದಂತೆ ಇತರ ಮಂತ್ರಿಗಳೂ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ದುರಂತ ಮತ್ತು ಖಂಡನೀಯ. ಬೇಲಿಯೇ ಎದ್ದು ಹೊಲ ಮೇಯುತ್ತಿದೆ ಎಂಬಂತೆ ದಲಿತರ ಓಗ್ಗಟ್ಟಿನ ಓಟುಗಳಿಂದ ಸರ್ಕಾರ ರಚಿಸಿದ ಕಾಂಗ್ರೆಸ್, ಈಗ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿರುವುದು ಅಸಮಾಧಾನವನ್ನು ಉಂಟು ಮಾಡಿದೆ.
ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ. ಕನ್ನಡಿಗರೆಲ್ಲರಿಗೂ ಈ ಯೋಜನೆಯಿಂದ ಅನುಕೂಲವಾಗಿದೆ, ಸಂತೋಷ. ಆದರೆ ಗ್ಯಾರಂಟಿಗಳ ಉದ್ದೇಶವೇ ಬೇರೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯ ಉದ್ದೇಶವೇ ಬೇರೆ. ಗ್ಯಾರಂಟಿಗಳು ದಲಿತರು ಮತ್ತು ದಲಿತೇತರರ ನಡುವಿನ ಸಾಮಾಜಿಕ-ಆರ್ಥಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದಿಲ್ಲ. ಆದ್ದರಿಂದ ಈಗಿಂದೀಗಲೇ ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕೆಂದು ದಲಿತ ಸಂಘರ್ಷ ಸಮಿತಿಯು ದಿನಾಂಕ 4-3-2025 ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಿಸಿ ಸರ್ಕಾರಕ್ಕೆ ಆಗ್ರಹಿಸುತ್ತದೆ.ಎಂದು ವೆಂಕಟೇಶಯ್ಯನವರು ತಿಳಿಸಿದರು
ಈ ಹಿಂದೆ ದಲಿತ ಸಂಘಟನೆಗಳ ಒತ್ತಾಯಕ್ಕೆ ಮಣಿದು ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯ 7ಡಿ ಸೆಕ್ಷನ್ ರದ್ದುಪಡಿಸಿದಂತೆ 7ಸಿ ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿಯು ಸರ್ಕಾರವನ್ನು ಒತ್ತಾಯಿಸುತ್ತದೆ. ಹಾಗೂ ಸಂವಿಧಾನ ವಿಧಿ 46ರ ಆಶಯವನ್ನು ಪಾಲಸಬೇಕೆಂದು ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನೆಡೆಸಿ ಸರ್ಕಾರವನ್ನು ಎಚ್ಚರಿಸುತ್ತದೆ
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಕಾಶ ಕೆಲೂರು.ರಮೇಶ ಬಾಳಮ್ಮನವರ. ವಾಸುದೇವ ಹುಣಸಿಮರದ.ಗುರುರಾಜ ಭಜಂತ್ರಿ.ಮಂಜುನಾಥ ಚಲವಾದಿ ಯಮನೂರ ಹೊಸಳ್ಳಿ ಡಿ ಎಫ್ ಕಾಳೆ.ಚಂದಪ್ಪ ಕಟ್ಟಿಮನಿ.ಮುತ್ತು ಹದ್ಲಿ.ಸಂತೋಷ ಕಲ್ಯಾಣಿ.ಬಸವರಾಜ ಗಾಡಗೊಳಿ.ಮಂಜುನಾಥ ಲಿಂಗದಾಳ ಉಪಸ್ಥಿತರಿದ್ದರು.