ಸರ್ಕಾರಿ ಪ್ರೌಡಶಾಲೆ ಮಂಜೂರಾತಿ, ಸರ್ಕಾರಿ ಆಸ್ಪತ್ರೆಯ ಸಮಸ್ಯೆ ಬಗೆಹರೆಸುವಂತೆ ಮನವಿ
Request to sanction government high school, resolve government hospital issue
ಸರ್ಕಾರಿ ಪ್ರೌಡಶಾಲೆ ಮಂಜೂರಾತಿ, ಸರ್ಕಾರಿ ಆಸ್ಪತ್ರೆಯ ಸಮಸ್ಯೆ ಬಗೆಹರೆಸುವಂತೆ ಮನವಿ
ವಿಜಯಪುರ, 27 : ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಸರಕಾರಿ ಪ್ರೌಡಶಾಲೆ ಪ್ರಾರಂಭಿಸುವುದರ ಜೊತೆಗೆ ಮೂಲಭೂತ ಸೌಕರ್ಯ ಒದಗಿಸುವುದು ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಸಚಿವರಾದ ಮಾನ್ಯ ಎಂ,ಬಿ ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಹೊನವಾಡ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ 7 ನೇ ತರಗತಿ ಕಲಿತ ಮಕ್ಕಳಿಗೆ ಮುಂದೆ ಕೂಡಾ ಓದಬೇಕಾದರೆ ಸರಕಾರಿ ಪ್ರೌಡಶಾಲೆ ಬೇಕೆ ಬೇಕು ಎಂದು ತಮ್ಮ ಗಮನಕ್ಕೂ ಈ ವಿಷಯವನ್ನು ತಂದಾಗ ಈ ವರ್ಷ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಿರಿ ಆದರೆ ಅದು ಸಾಧ್ಯವಾಗಿಲ್ಲ, ಕೂಡಲೇ ಅಲ್ಲಿಯೇ ಇರುವ ಶಾಲಾ ಕಟ್ಟಡದಲ್ಲಿ ಪ್ರೌಡಶಾಲೆ ಪ್ರಾರಂಭಿಸಬೇಕು ಜೊತೆಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಸಿಬ್ಬಂದಿ ಹಾಗೂ ಕಲಿಕಾ ಸಾಮಗ್ರಗಳನ್ನು ಪೂರೈಸಬೇಕು ಎಂದರು
ಜೊತೆಗೆ ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ತುಂಬಾ ಇದೆ ಕೂಡಲೇ ಅಲ್ಲಿಯೂ ಅವಶ್ಯಕತೆಗೆ ಅನುಗುಣವಾಗಿ ಸಿಬ್ಬಂದಿ ಕಳಿಸಬೇಕು ಈ ಮೂಲಕ ಬಡವರಿಗೆ, ರೈತರಿಗೆ ಅನುಕೂಲವಾಗುವುದು ಎಂದು ಹೊನವಾಡ ಗ್ರಾಮದ ಸಮಸ್ತ ಸಾರ್ವಜನಿಕರ ಪರವಾಗಿ ಮನವಿ ಸಲ್ಲಿಸಲಾಯಿತು.
ಈ ವೇಳೆ ಮನವಿ ಸ್ವೀಕರಿಸಿದ ಸಚಿವರು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೆ ಅಧಿಕಾರಿಗಳನ್ನು ನಿಯೋಜಿಸುವಂತೆ ತಿಳಿಸಿದರು, ಹಾಗೂ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಕರೆ ಮಾಡಿ ಅದನ್ನು ಬಗೆಹರೆಸುವಂತೆ ತಿಳಿಸಿದರು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ, ರೈತ ಮುಖಂಡರಾದ ಶಾನೂರ ನಂದರಗಿ, ನಜೀರ ನಂದರಗಿ, ಹಣಮಂತ ಬ್ಯಾಡಗಿ, ಧರೆಪ್ಪ ಸೋರಡಿ, ಸುಧಾಕರ ನಲವಡೆ, ಕಾದರ ವಾಲಿಕರ, ರಿಯಾಜ ವಾಲಿಕರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 