ಮುಂದಿನ ಬಜೆಟ್‌ನಲ್ಲಿ ಚಂದ್ರಮೌಳೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳಲ್ಲಿ ಮನವಿ
Request to the Chief Minister to release funds for the development of Chandramouleshwara Temple in t
ಹುಬ್ಬಳ್ಳಿ 6: ಉಣಕಲ್ಲಿನಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾಗಿದೆ. ಈ ದೇವಸ್ಥಾನದ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಮುಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಅಗತ್ಯ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಹಾಗೂ ವಿಧಾನಸಭೆ ಅರ್ಜಿಗಳ ಸಮಿತಿಯ ಅಧ್ಯಕ್ಷರಾದ ರುದ್ರ್ಪ ಲಮಾಣಿ ಅವರು ಹೇಳಿದರು. ಇಂದು ಉಣಕಲ್ಲ ಪ್ರದೇಶದ ಚಂದ್ರಮೌಳೆಶ್ವರ ದೇವಸ್ಥಾನಕ್ಕೆ ಕರ್ನಾಟಕ ವಿಧಾನಸಭೆ ಅರ್ಜಿ ಸಮಿತಿ ಸದಸ್ಯರು ಭೇಟಿ ನೀಡಿದ ಬಳಿಕ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅರ್ಜಿಗಳ ವಿಚಾರಣೆ ಜರುಗಿಸಿ, ಪತ್ರಿಕಾಗೋಷ್ಠಿ ಜರುಗಿಸಿ ಅವರು ಮಾತನಾಡಿದರು. ದೇವಸ್ಥಾನದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತದೆ. ಈಗಾಗಲೇ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಸೂಕ್ತ ರೀತಿಯಲ್ಲಿ ಸ್ಥಳಾಂತರ ಮಾಡಬೇಕು. ಅಲ್ಲದೇ ಅವರಿಗೆ ಬೇರೆ ಕಡೆಯಲ್ಲಿ ಮನೆಗಳನ್ನು ನಿರ್ಮಾಣ ಮಾಡಬೇಕಾಗುತ್ತದೆ. ಅಲ್ಲದೇ ಕೆಲವರು ಉತ್ತಮ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರ ಮನವೊಲಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಈ ಮೊದಲೇ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ಜನರ ಸಮಸ್ಯೆಗಳನ್ನು ಆಲಿಸಲಾಗಿದೆ. ನಿವಾಸಿಗಳು ಸಹ ಹೊಸ ಮನೆ ನಿರ್ಮಾಣ ಮಾಡಿಕೊಳ್ಳಲು ಜಾಗದ ಸಮಸ್ಯೆ ಹೆಚ್ಚಾಗಿದೆ. ಅಲ್ಲದೇ ಪುರಾತತ್ವ ಇಲಾಖೆ ಅಧಿಕಾರಿಗಳು ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ. ಹೀಗಾಗಿ ಬೇರೆ ಕಡೆಯಲ್ಲಿ ಜಾಗ ಕೊಟ್ಟರೆ ಇಲ್ಲಿಂದ ಸ್ಥಳಾಂತರವಾಗುತ್ತೇವೆ ಎಂದು ಕೆಲವರು ಹೇಳಿದ್ದಾರೆ. ಈ ವಿಷಯವನ್ನು ಸಮಿತಿಯ ಮುಂದಿಟ್ಟು, ಪರಿಹಾರ ಕಂಡುಕೊಳ್ಳಬೇಕು. ದೇವಸ್ಥಾನ ಅಭಿವೃದ್ಧಿ ಕುರಿತು ಯೋಜನೆ ರೂಪಿಸಿ, ಮುಂದಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಎಲ್ಲ ವಿಷಯಗಳ ಬಗ್ಗೆ ಸುಲಲಿತವಾಗಿ ಚರ್ಚೆ ನಡೆಸಲಾಗಿದ್ದು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ನಿರಪೆಕ್ಷಣಾ ಪ್ರಮಾಣ ಪತ್ರ (ನೋ ಆಬ್ಜೆಕ್ಷನ್ ಸರ್ಟಿಫಿಕೇಟ್) ನೀಡಲು ಒಪ್ಪಿದ್ದಾರೆ ಎಂದು ಅವರು ತಿಳಿಸಿದರು.
ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಚಂದ್ರಮೌಳೇಶ್ವರ ದೇವಸ್ಥಾನ ವೀಕ್ಷಿಸಲು ಆಗಮಿಸುತ್ತಾರೆ. ಇತ್ತೀಚೆಗೆ ಬಾಂಬೆ, ಪುಣೆ ನಗರಗಳಿಂದ ಸಹ ಪ್ರವಾಸಿಗರು ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಐತಿಹಾಸಿಕ ಸ್ಥಳಕ್ಕೆ ಮುಕ್ತಿ ದೊರೆಯಬೇಕು ಎಂಬ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ. ಉದ್ಯಾನವನ, ಶೌಚಾಲಯ, 4 ರಸ್ತೆಗಳನ್ನು ಕೂಡಿಸುವುದು ಸೇರಿದಂತೆ ಒಟ್ಟಾರೆಯಾಗಿ ದೇವಸ್ಥಾನದ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಈ ದೇವಸ್ಥಾನ ಪುರಾತತ್ವ ಇಲಾಖೆ ಅಡಿಯಲ್ಲಿದ್ದು, ಮುಜರಾಯಿ ಇಲಾಖೆಯ ಸಿ ವರ್ಗಕ್ಕೆ ಸೇರಿದೆ. ದೇವಸ್ಥಾನಕ್ಕೆ ಯಾವುದೇ ಆದಾಯವಿರುವುದಿಲ್ಲ. ದೇವಸ್ಥಾನ ಗೂಗಲ್‌ನಲ್ಲಿ ಮಾತ್ರ ನಮಗೆ ಕಾಣಸಿಗುತ್ತದೆ. ದೇವಸ್ಥಾನಕ್ಕೆ ಭೇಟಿ ನೀಡಲು ಸರಿಯಾದ ದಾರಿ ಕೂಡ ಇಲ್ಲವಾಗಿದೆ. ದೇವಸ್ಥಾನದ ಅಭಿವೃದ್ಧಿ ಕುರಿತು ಶಾಸಕರು ಸಮಿತಿಗೆ ತಿಳಿಸಿದರು. ಅದರಂತೆ ಇಂದು ಸಮಿತಿಯು ದೇವಸ್ಥಾನಕ್ಕೆ ಭೇಟಿ ನೀಡಿ ಪರೀಶೀಲಿಸಿದೆ ಎಂದು ಅವರು ಹೇಳಿದರು. ದೇವಸ್ಥಾನ ಅಭಿವೃದ್ಧಿಗೆ ಸರ್ಕಾರದ ಸಹಾಯ ಅವಶ್ಯಕವಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ, ಕಟ್ಟಡ ನಿರ್ಮಾಣ, ಇತರೆ ಕಾಮಗಾರಿಗೆ ಸುಮಾರು ರೂ.25 ಕೋಟಿ ಅನುದಾನವನ್ನು ನೀಡುವಂತೆ ಮನವಿ ಮಾಡಲಾಗುವುದು. ಸುಮಾರು 56 ರಿಂದ 58 ಮನೆಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕರಾದ ಮಹೇಶ ಟೆಂಗಿನಕಾಯಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಕುರಿತು ನಿರಂತರ ಅಧ್ಯಯನ ಮಾಡಲಾಗಿದೆ. ಮಹಾನಗರ ಪಾಲಿಕೆ ಹಾಗೂ ಪುರಾತತ್ವ ಇಲಾಖೆ ಜಂಟಿ ಸರ್ವೇ ಕಾರ್ಯ ಮಾಡಿವೆ. ಅಲ್ಲದೇ ಡ್ರೋಣ ಸರ್ವೇ ಕೂಡ ಮಾಡಲಾಗಿದೆ. ದೇವಸ್ಥಾನ ಅಭಿವೃದ್ಧಿ ಕುರಿತು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ದೇವಸ್ಥಾನ ವಿನ್ಯಾಸಕ್ಕೆ ಒಪ್ಪಿಗೆ ಸೂಚಿಸಿದೆ. ಸುಮಾರು ರೂ.17 ರಿಂದ 18 ಕೋಟಿ ಹಣ ಪರಿಹಾರ ನೀಡಲು ಹಾಗೂ ರೂ. 7 ಕೋಟಿ ಹಣ ಅಭಿವೃದ್ಧಿಗೆ ಅವಶ್ಯಕವಾಗಿದೆ. ವಾಹನ ನಿಲುಗಡೆ, ಅಂಗಡಿಗಳು, ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಇಂದಿನ ಸಭೆಯಲ್ಲಿ ಸುಮಾರು 5 ಅರ್ಜಿಗಳನ್ನು ಸಮಿತಿಯು ಚರ್ಚಿಸಿದೆ ಎಂದು ಅವರು ತಿಳಿಸಿದರು. ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯ ಸದಸ್ಯರು ಉಣಕಲ್ಲಿನ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪರೀಶೀಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯ ಸದಸ್ಯರಾಗಿರುವ ಶಾಸಕರಾದ ಎನ್.ಸುರೇಶಕುಮಾರ, ಎ.ಮಂಜು, ಸಿ.ಎನ್.ಬಾಲಕೃಷ್ಣ, ಹೆಚ್.ಡಿ.ತಮ್ಮಯ್ಯ, ಅವಿನಾಶ ಜಾಧವ, ದರ್ಶನ ಪುಟ್ಟಣ್ಣಯ್ಯ ಹಾಗೂ ಮಹಾಪೌರ ಜ್ಯೋತಿ ಪಾಟೀಲ, ಉಪಮಹಾಪೌರ ಸಂತೋಷ್ ಚವ್ಹಾಣ, ಜಿಲ್ಲಾಧಿಕಾರಿ ದಿವ್ಯಪ್ರಭು, ಪೊ??ಬೇಷನರಿ ಐಎಎಸ್ ಅಧಿಕಾರಿ ರೀತೀಕಾ ವರ್ಮಾ, ಪಾಲಿಕೆ ಆಯುಕ್ತರಾದ ಡಾ.ರುದ್ರೇಶ ಘಾಳಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಸಂತೋಷ್ ಬಿರಾದಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ ಗಸ್ತೆ ಸೇರಿದಂತೆ ಪಾಲಿಕೆ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು, ಪ್ರವಾಸೋಧ್ಯಮ, ಪುರಾತತ್ವ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಭೂದಾಖಲೆಗಳ ಇಲಾಖೆ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 