ಪರಿಷ್ಕೃತ ಸುದ್ದಿಯನ್ನು ಬಳಸಿಕೊಳ್ಳಲು ಕೋರಿಕೆರ್ಯಾಂಕ್ ನಲ್ಲಿ ಸ್ವಲ್ಪ ತಿದ್ದುಪಡಿ ಮಾಡಲಾಗಿದೆ
RequestRank has been slightly modified to accommodate the updated news
ಲೋಕದರ್ಶನ ವರದಿ
ವಿಜಯಪುರ 28 : ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ್ಯಾಂಕ್ ಲಭಿಸಿದೆ.ನ್ಯಾಷನಲ್ ಟೈಮ್ಸ್ ಎಂಜಿನಿಯರಿಂಗ್ ರ್ಯಾಂಕಿಂಗ್ ನಡೆಸಿದ ಸಮೀಕ್ಷೆಯಲ್ಲಿ ಈ ಸ್ಥಾನ ಸಿಕ್ಕಿದೆ. ಈ ಸಂಸ್ಥೆ ದೇಶದ ನಾನಾ ಎಂಜಿನಿಯರಿಂಗ್ ಕಾಲೇಜುಗಳ ಸಮೀಕ್ಷೆ ನಡೆಸಿದ್ದು, ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜು ನಾನಾ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದೆ.ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ವ್ಯವಸ್ಥೆ ಮಾಡುವಲ್ಲಿ ದೇಶದ ಉನ್ನತ 70 ಖಾಸಗಿ ಕಾಲೇಜುಗಳ ಪೈಕಿ ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿಗೆ 43ನೇ ರ್ಯಾಂಕ್ ಬಂದಿದೆ.
ಅದೇ ರೀತಿ ದೇಶದ 125 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 27ನೇ ರ್ಯಾಂಕ್ ಬಂದಿದ್ದರೆ, ದಕ್ಷಿಣ ಭಾರತದ ಅತ್ಯುತ್ತಮ 25 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 15ನೇ ಸ್ಥಾನ ಲಭಿಸಿದೆ.ಕಾಲೇಜಿನ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಸಂತಸ ವ್ಯಕ್ತಪಡಿಸಿದ್ದು, ಕಾಲೇಜಿನ ಎಲ್ಲ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಪಿ. ಮಂಜುನಾಥ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಧನ್ಯವಾದಗಳು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 