ಭಾರತ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಮ್ಮ ಮುತುವರ್ಜಿಗೆ ಆಗ್ರಹಿಸಿ ಮನವಿ

ಭಾರತ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಮ್ಮ ಮುತುವರ್ಜಿಗೆ ಆಗ್ರಹಿಸಿ ಮನವಿ Requesting their foresight on the steps to be taken by the Government of India

ಲೋಕದರ್ಶನ ವರದಿ

ಕೊಪ್ಪಳ  13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ.15 ಮತ್ತು ಶೇ.3 ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದಲ್ಲಿ ಹೆಚ್ಚಿಸಬೇಕೆಂಬ ಆಗ್ರಹದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ನ್ಯಾ.ಹೆಚ್‌.ಎನ್‌.ನಾಗಮೋಹನ ದಾಸ್ ಅವರ ಆಯೋಗವು ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7 ರಷ್ಟು ಹೆಚ್ಚಳ ಮಾಡಬೇಕೆಂದು ವರದಿ ನೀಡಿತು. ಈ ವ ವರದಿಯನ್ನು ಅಂದಿನ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಸವರಾಜ ಬೊಮ್ಮಾಯಿಯವರ ಸರ್ಕಾರ ಅಂಗೀಕರಿಸಿ ಅದರ ಜಾರಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಂಡಿತು.

ಈ ಅಂಶದ ಬಗ್ಗೆ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಿದ್ದವು. ಹೀಗಾಗಿ ಅದು ಭಾರತ ಸರ್ಕಾರದ ಮುಂದಿನ ಕ್ರಮಕ್ಕೆ ಕಳಿಸಲ್ಪಟ್ಟಿರುವುದು ತಮಗೆ ತಿಳಿದ ವಿಷಯವೇ ಆಗಿದೆ. ಕರ್ನಾಟಕ ವಿಧಾನಸಭೆಯ ಈ ತೀರ್ಮಾನಕ್ಕೆ ಒಕ್ಕೂಟ ಸರ್ಕಾರ ಒಪ್ಪಿಗೆಯನ್ನು ನೀಡಿ ಸಂವಿಧಾನದ 9 ಷೆಡ್ಯೂಲಿಗೆ ಸೇರೆ​‍್ಡ ಮಾಡಬೇಕಾಗಿದೆ. ಆದ್ದರಿಂದ ತಾವು ಒಕ್ಕೂಟ ಸರ್ಕಾರದ ಮೇಲೆ ಒತ್ತಡವನ್ನು ತಂದು ಇದರ ಜಾರಿಗೆ ಮುತುವರ್ಜಿ ಮಾಡಬೇಕಾಗಿ ಸಿಪಿಐ(ಎಂ) ಪಕ್ಷವು ವಿನಂತಿಸುತ್ತದೆ. ಇದೇ ಸಂದರ್ಭದಲ್ಲಿ ಭಾರತೀಯ ಸಮಾಜದ ವಾಸ್ತವಗಳ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸಬೇಕೆಂಬ ಬೇಡಿಕೆಗೆ ಪೂರಕವಾಗಿ ದೇವಿಂದರ್ ಸಿಂಗ್ ವರ್ಸಸ್ ಪಂಜಾಬ್ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ​‍್ು ಮಹತ್ವದ್ದಾಗಿದೆ.