ಬಾವಿಗೆ ಬಿದ್ದ ಕಪ್ಪು ಚಿರತೆಯ ರಕ್ಷಣೆ
Rescue of a black leopard that fell into a well
ಬ್ರಹ್ಮಾವರ: ತಾಲ್ಲೂಕಿನ ಆರೂರು ಗ್ರಾಮದಲ್ಲಿ ಕೋಳಿಯೊಂದನ್ನು ಅಟ್ಟಿಸಿಕೊಂಡು ಹೋಗಿ ಬಾವಿಗೆ ಬಿದ್ದಿದ್ದ ಕಪ್ಪು ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಭಾನುವಾರ ರಾತ್ರಿ ಕೋಳಿಯನ್ನು ಅಟ್ಟಿಸಿಕೊಂಡು ಹೋದ ಚಿರತೆ ಗ್ರಾಮದ ಅಡ್ಜೀಲ್ನ ಶಂಕರ ಪೂಜಾರಿ ಅವರ ಆವರಣವಿಲ್ಲದ ಬಾವಿಗೆ ಬಾವಿಗೆ ಬಿದ್ದಿದೆ. ಮನೆಯವರು ಈ ವಿಷಯವನ್ನು ತಕ್ಷಣ ಪಂಚಾಯಿತಿ ಅಧ್ಯಕ್ಷ ಗುರುರಾಜ ರಾವ್ ಅವರಿಗೆ ತಿಳಿಸಿದ್ದು, ಅವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸೋಮವಾರ ಬೆಳಿಗ್ಗೆ ಬಂದ ಅಧಿಕಾರಿಗಳು, ಬಾವಿಯೊಳಗೆ ಪಂಜರವನ್ನು ಇಳಿಸಿ ಚಿರತೆಯನ್ನು ಮೇಲಕ್ಕೆತ್ತಿ, ಕುದುರೆಮುಖ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಪಶ್ಚಿಮ ಘಟ್ಟದ ಕಾಡುಗಳಲ್ಲಿ ಹೆಚ್ಚಾಗಿ ಕಾಣಸಿಗುವ ಕಪ್ಪು ಚಿರತೆ, ಉಡುಪಿ ಜಿಲ್ಲೆಯಲ್ಲಿ ಕಾಣಸಿಗುವುದು ಅಪರೂಪ. ಬಾವಿಗೆ ಬಿದ್ದಿದ್ದ ಗಂಡು ಚಿರತೆ ಸುಮಾರು ಮೂರು ವರ್ಷದ್ದಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕೈದು ತಿಂಗಳುಗಳಿಂದ ಕಪ್ಪು ಚಿರತೆ ಆರೂರು ಗ್ರಾಮದಲ್ಲಿ ಸಂಚರಿಸುತ್ತಿದ್ದು, ಕೆಲವರ ನಾಯಿಗಳನ್ನು ಹೊತ್ತೊಯ್ದಿದಿದೆ. ಇದರಿಂದ ಜನರು ಭಯಭೀತರಾಗಿದ್ದರು. ಚಿರತೆ ಸೆರೆ ಹಿಡಿದ ಮೇಲೆ ನೆಮ್ಮದಿಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ಅರಣ್ಯಾಧಿಕಾರಿ ವಾಸೀಂ ಶೇಖ್, ಗಾರ್ಡ್ಗಳಾದ ರಮೇಶ್, ಶ್ರೀನಿವಾಸ, ರಾಮಚಂದ್ರ ಮತ್ತು ಪ್ರವೀಣ್ ಭಾಗವಹಿಸಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 