ನಾಯಿಗಳ ದಾಳಿಯಿಂದ ತಪ್ಪಿಸಿಕೊಂಡು ಊರಿಗೆ ಬಂದ ಪುನುಗು ಬೆಕ್ಕು ರಕ್ಷಣೆ
Rescue of a small Indian civet that escaped a dog attack and entered the village
ಲೋಕದರ್ಶನ ವರದಿ
ಮುಂಡಗೋಡ 25 : ಪಟ್ಟಣದ ಇಂದಿರಾ ನಗರ ಪ್ಲಾಟ್ ಪ್ರದೇಶದಲ್ಲಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಊರೊಳಗೆ ಬಂದಿದ್ದ ಪುನುಗು ಬೆಕ್ಕನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಶುಕ್ರವಾರ ರಾತ್ರಿ ಸ್ಥಳೀಯರು ಪುನುಗು ಬೆಕ್ಕನ್ನು ಕಂಡು ಅರಣ್ಯಇಲಾಖೆ ಅಧಿಕಾರಿಗಳಾದ ಡಿ ಆರ್ ಎಫ್ ಓ ಅರುಣಕುಮಾರ ಕಾಶಿ ಅವರಿಗೆ ಮಾಹಿತಿ ನೀಡಿದರು. ಅವರು ಅರಣ್ಯ ಇಲಾಖೆಯ ಬೀಟ್ ಫಾರೆಸ್ಟರ್ ಮುತ್ತುರಾಜ ಹಳ್ಳಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡರು. ಬಳಿಕ ಮುತ್ತುರಾಜ ಹಳ್ಳಿ ಅವರು ಪುನುಗು ಬೆಕ್ಕನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಿದರು. ಪುನುಗು ಬೆಕ್ಕು ನೋಡಲು ಸಾಮಾನ್ಯ ಬೆಕ್ಕಿನಂತಿದ್ದರೂ, ಇದು ವಿವೆರಿಡೆ ಕುಟುಂಬಕ್ಕೆ ಸೇರಿದ ಅಪರೂಪದ ಕಾಡು ಪ್ರಾಣಿಯಾಗಿದೆ. ಮುಖ್ಯವಾಗಿ ರಾತ್ರಿ ವೇಳೆ ಸಂಚರಿಸುವ ಈ ಪ್ರಾಣಿ ಇಲಿ, ಕೀಟ, ಹಾವು ಹಾಗೂ ಹಣ್ಣು-ಹಂಪಲುಗಳನ್ನು ಆಹಾರವಾಗಿ ಸೇವಿಸುತ್ತದೆ. ಪರಿಸರ ಸಮತೋಲನ ಕಾಪಾಡುವಲ್ಲಿ ಹಾಗೂ ಇಲಿಗಳ ನಿಯಂತ್ರಣದಲ್ಲಿ ಇದರ ಪಾತ್ರ ಮಹತ್ವದ್ದಾಗಿದೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 