ಕೊಪ್ಪಳ 12: ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ರಾಜಕೀಯಕ್ಕೆ ಹೋಗಲು ಕುಟುಂಬದಲ್ಲಿ ಸಹಕಾರ ನೀಡುತ್ತಿಲ್ಲ ಆದ್ದರಿಂದ ರಾಜಕೀಯ ದಲ್ಲಿ ಮಹಿಳೆಯರಿಗೆ ಮೀಸಲಾತಿ ಅಗತ್ಯ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಉಮೇಶ್ ಅಂಗಡಿ ಹೇಳಿದರು..ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಹಮ್ಮಿಕೊಂಡಿದ್ದ ಪ್ರಸ್ತುತ ರಾಜಕೀಯದಲ್ಲಿ ಮಹಿಳೆಯರ ಪಾತ್ರ ಮತ್ತು ಮೀಸಲಾತಿ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.ಪುರಾಣ ಮತ್ತು ಪ್ರಾಚೀನ ಕಾಲದಲ್ಲಿ ಮಹಿಳೆಯರು ಉನ್ನತ ವಾದ ಸ್ಥಾನದಲ್ಲಿ ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬ ಪುರುಷರ ಯಶಸ್ವೀನಿ ಹಿಂದೆ ಮಹಿಳೆ ಇರುತ್ತಾಳೆ. ಸ್ವತಂತ್ರ ಹೋರಾಟದಲ್ಲಿ ಮಹಿಳೆರು ಪಾಲ್ಗೊಂಡಿದ್ದಾರೆ. ಸಂವಿಧಾನ ರಚನೆಯಲ್ಲಿ 15 ಮಹಿಳೆಯರು ಇದ್ದರು. ಪ್ರಸ್ತುತ ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ. ಮಹಿಳೆಯರಿಗೆ ಮಿಸಲಾತಿ ಕೊಟ್ಟರೂ ಕೂಡ ಮೇಲ್ವರ್ಗದ ಮಹಿಳೆಯರು ಹೆಚ್ಚಿನ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ ಎಂಬ ಮಾತಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಮಹಿಳೆಯರಿಗೆ ಶಿಕ್ಷಣ ಮತ್ತು ಉದ್ಯೋಗ ದಲ್ಲಿ ಶೇ. 32 ಮಿಸಲಾತಿಯಿದೆ. ಇದನ್ನು ಸದುಪಯೋಗ ಮಾಡಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಇದೆ.
ಆದರೆ ಲೋಕಸಭೆ ಮತ್ತು ವಿಧಾನಸಭೆ ಯಲ್ಲಿ ಮೀಸಲಾತಿ ಇಲ್ಲ ಎಂದು ಅಭಿಪ್ರಾಯ ಪಟ್ಟರು.ಕಾರ್ಯಕ್ರಮದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಗವಿಸಿದ್ದಪ್ಪ ಮುತ್ತಾಳ ಅವರು ಮಾತನಾಡುತ್ತ ಈ ರೀತಿಯ ವಿಶೇಷ ಉಪನ್ಯಾಸಗಳು ವಿದ್ಯಾರ್ಥಿಗಳ ಜ್ಞಾನದ ಗುಣಮಟ್ಟ ಹೆಚ್ಚಾಗುತ್ತದೆ. ಇದರಿಂದ ಹೊಸ ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಇಂದಿನ ತಾರತಮ್ಯ ಸಮಾಜದಲ್ಲಿ ಸಮಾನತೆಗಾಗಿ ಮತ್ತು ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲು ರಾಜಕೀಯ, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮಹಿಳಾ ಮೀಸಲಾತಿ ಅಗತ್ಯ. ಮಹಿಳೆಯರ ಸಮಾನತೆ ಹಕ್ಕುಗಳಿಗಾಗಿ ಡಾ. ಬಿ. ಆರ್ ಅಂಬೇಡ್ಕರ್ ಅವರು ಶ್ರಮಿಸಿದ್ದಾರೆ. ಸಂವಿಧಾವು ಮಹಿಳೆಯರಿಗೆ ಪುರುಷರಿಗೆ ಸಮಾನವಾದ ಹಕ್ಕು ಗಳನ್ನು ನೀಡಿದೆ. ನಾವೆಲ್ಲರೂ ಜಾತಿ ಮತ್ತು ಧರ್ಮದಿಂದ ಹೊರಗಡೆ ಬರಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಬಾರತೀಯ ಸಮಾಜ ಪುರುಷ ಪ್ರಧಾನ ಸಮಾಜ. ಮಹಿಳೆಯರಿಗೆ ಹಕ್ಕುಗಳನ್ನು ನಿರಾಕರಿಲಾಗುತ್ತದೆ. ಅವರ ಹಕ್ಕುಗಳಿಗಾಗಿ ಮಹಿಳೆಯರು ಹೋರಾಟ ಮಾಡಿದ್ದಾರೆ. ನಮ್ಮ ಸಮಾಜ ಬಹಳ ನಿಧಾನವಾಗಿ ಬದಲಾವಣೆ ಆಗುತ್ತದೆ.
ಮಹಿಳೆರನ್ನು ಮುಖ್ಯ ವಾಹಿನಿಗೆ ತರಬೇಕು. ಸಂವಿಧಾನದ ಸೌಲಭ್ಯ ಗಳನ್ನು ಬಳಸಿಕೊಳ್ಳಬೇಕು. ಹೆಚ್ಚಿನ ಮಹಿಳೆಯರು ಉನ್ನತ ಶಿಕ್ಷಣ ಪಡೆಯಬೇಕು ಎಂದರು.ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ. ಗೀತಾ ಮುತ್ತಾಳ, ಜಾಫರ್ ಸಾದಿಕ್, ನಿಂಗಪ್ಪ, ಡಾ. ಅಶೋಕ ಕುಮಾರ, ಡಾ. ನರಸಿಂಹ, ಶ್ರೀ ಕಾಂತ್, ನಿಂಗಜ್ಜ ಸೋಂಪುರ್ ಹಾಗೂ ಇತರರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ತಸ್ಲೀಮ್ ನಿರೂಪಿಸಿ ದರು. ರತ್ನ ಸ್ವಾಗತಸಿದರು, ಯೋಗೀತಾ ಪ್ರಾರ್ಥನೆ ಗೀತೆ ಹಾಡಿದರು. ಭವ್ಯ ಕವನ ವಾಚನ ಮಾಡಿದರು. ಯಲ್ಲಮ್ಮ ವಂದಿಸಿದರು.