ಸರಕಾರಿ ಉದ್ಯೋಗ, ಶಿಕ್ಷಣದಲ್ಲಿ ಶೇಕಡಾ ಹತ್ತ್ತರಷ್ಟು ಮೀಸಲಾತಿ

ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಕರ್ಾರ ಆಥರ್ಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿಧರ್ಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. 

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಅಗತ್ಯವಿರುವುದರಿಂದ ಮಂಗಳವಾರ ಲೋಕಸಭೆಯಲ್ಲಿ ಮೀಸಲಾತಿ ತಿದ್ದುಪಡಿ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈ ವಿಧೇಯಕ ಜಾರಿಯಿಂದ ಆಥರ್ಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿಗಳಿಗೆ(ವಾಷರ್ಿಕ 8 ಲಕ್ಷಕ್ಕಿಂತ ಕಡಿಮೆ ಆದಾಯ) ಲಾಭವಾಗಲಿದೆ ಎಂದು ಮೂಲಗಳು ತಿಳಿಸಿವೆ. 

ಕೇಂದ್ರ ಸಚಿವ ಸಂಪುಟದಲ್ಲಿ ಆಥರ್ಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ನೀಡಲು ತೀಮರ್ಾನಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ಖಚಿತಪಡಿಸಿದೆ ಎಂದು ವರದಿ ವಿವರಿಸಿದೆ. 

ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ. ಆದರೆ ಇನ್ನೂ 2ಎರಡು ದಿನಗಳ ಕಾಲು ಮುಂದೂಡಿಕೆಯಾಗಲಿರುವ ಕಲಾಪದಲ್ಲಿ ತಿದ್ದುಪಡಿ ವಿಧೇಯಕ ಪಾಸ್ ಆಗುತ್ತದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಳವಾಗಬಾರದು ಎಂಬುದಾಗಿ ಸುಪ್ರೀಂಕೋಟರ್್ ಕೂಡಾ ತೀಪು ನೀಡಿದೆ.