ಕಂಪ್ಲಿ 15 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆ ಇಂದು ಕಂಪ್ಲಿ ಪಟ್ಟಣದ ಬಾಲಕೀಯರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸುಗಮವಾಗಿ ಜರುಗಿದವು.
ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಗಳನ್ನು ನಡೆಸುತ್ತಿದ್ದು, ಇಂದು ಕಂಪ್ಲಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು 432 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 3 ಜನ ವಿದ್ಯಾರ್ಥಿಗಳು ಗೈರಾಗಿದ್ದು, 429 ವಿದ್ಯಾರ್ಥಿಗಳು ಹಾಜರಾಗಿದ್ದರು.
ಸುಗಮ ಪರೀಕ್ಷೆಗಾಗಿ ವ್ಯಾಪಾಕ ಬಂದೋಬಸ್ತ್ ಏರಿ್ಡಸಿದ್ದು, ಎಲ್ಲಾ ರೀತಿಯ ಮೂಲಭೂತ ಸೌರ್ಯಗಳನ್ನು ಪರೀಕ್ಷಾ ಕೇಂದ್ರದಲ್ಲಿ ಮಾಡಲಾಗಿತ್ತು.ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿ ಪ್ರಾಚಾರ್ಯ ಮಹ್ಮದ್ ಶಫಿ ಕಾರ್ಯನಿರ್ವಹಿಸಿದರೆ, ಗ್ರೇಡ್-2 ತಹಸಿಲ್ದಾರ್ ಎಂ.ಆರ್.ಷಣ್ಮುಖ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು. ತಹಸಿಲ್ದಾರ್ ಶಿವರಾಜ್ ಶಿವಪುರ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.