ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಿ : ಜಿಲ್ಲಾಧಿಕಾರಿ
Resolve human rights violation cases: District Collector
ಕಾರವಾರ, ಏ.21 :- ಮಾನವ ಹಕ್ಕು ಉಲ್ಲಂಘನೆ ಕುರಿತಂತೆ ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ದಾಖಲಾಗಿರುವ ಜಿಲ್ಲೆಯ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥಪಡಿಸಿ, ಈ ಕುರಿತು ವರದಿ ನೀಡುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಗೆ ಮಾನವ ಹಕ್ಕು ಆಯೋಗದ ಭೇಟಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಏಪ್ರಿಲ್ 28 ಮತ್ತು 29 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಏ.29 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಆಯೋಗದಲ್ಲಿ ನೋಂದಣಿಯಾಗಿ ಬಾಕಿ ಇರುವ ಜಿಲ್ಲೆಯ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸಲಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಆಯೋಗದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಸಂಪೂರ್ಣ ವರದಿಯನ್ನು ನೀಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ವಿಚಾರಣೆ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಪ್ಪದೇ ಹಾಜರಾಗುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪ್ರಕರಣದ ಕುರಿತ ಸಂಪೂರ್ಣ ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದರು. ಜಿಲ್ಲೆಯಲ್ಲಿ ಮಕ್ಕಳು, ಮಹಿಳೆಯರು, ವಿಕಲಚೇತನರು ಸೇರಿದಂತೆ ಸಾರ್ವಜನಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿರುವ ಇಲಾಖೆಯ ಅಧಿಕಾರಿಗಳು ತಾವು ಇದುವರೆಗೆ ನೀಡಿರುವ ಸೌಲಭ್ಯಗಳು ಮತ್ತು ವೆಚ್ಚ ಮಾಡಿರುವ ಮೊತ್ತದ ವಿವರಗಳೊಂದಿಗೆ ಹಾಜರಾಗಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಶಿರಸಿ ಉಪ ವಿಭಾಗಾಧಿಕಾರಿ ಚಂದ್ರಶೇಖರ, ವಿವಿಧ ಇಲಾಖೆಯ ಅಧಿಕಾರಿಗಳು, ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಹಾಜರಿದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 