ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
Respond to public issues: Deputy Commissioner C.N. Sridhar
ಲೋಕದರ್ಶನ ವರದಿ
ಗದಗ 17: ಸರ್ಕಾರಿ ಕಚೇರಿಗಳಿಗೆ ವಿವಿಧ ಕೆಲಸಗಳಿಗೆ ಆಗಮಿಸುವ ಹಿರಿಯ ನಾಗರಿಕರು, ಮಹಿಳೆಯರು, ರೈತರು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಸೌಜನ್ಯಯುತವಾಗಿ ವರ್ತಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನ ಸೇವೆಯೇ ಜನಾರ್ಧನ ಸೇವೆಯಾಗಿದ್ದು ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸಾಮರಸ್ಯ ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿಷ್ಕಾಳಜಿ ತೋರಿಸಬಾರದು.
ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳಿಗೆ ಕಾಲಮಿತಿಯಲ್ಲಿಯೇ ವಿಳಂಬ ನೀತಿ ಅನುಸರಿಸದೇ ವಿಲೇವಾರಿಗೆ ಕ್ರಮ ವಹಿಸಬೇಕು. ಸರ್ಕಾರಿ ಅಧಿಕಾರಿ ಹಾಗೂ ನೌಕರರಿಗೆ ಶಿಸ್ತು ಹಾಗೂ ದಕ್ಷತೆ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಚೇರಿ ಕೆಲಸಕ್ಕೆ ಸರಿಯಾದ ಸಮಯಕ್ಕೆ ಹಾಜರಾಗುವುದು ಹಾಗೂ ಆಸಕ್ತಿಯಿಂದ ಕಚೇರಿ ಕೆಲಸ ನಿರ್ವಹಿಸುವುದು ಅಗತ್ಯವಾಗಿದೆ ಎಂದರು.
ಪ್ರತಿ ಕಚೇರಿಯಲ್ಲಿಯೂ ಕಚೇರಿಗೆ ಭೇಟಿ ನೀಡುವವರ ವಹಿಯನ್ನು ಕಡ್ಡಾಯವಾಗಿ ನಿರ್ವಹಣೆ ಮಾಡಬೇಕು. ಅದರಲ್ಲಿ ಅವರ ಸಂಕ್ಷಿಪ್ತ ಪರಿಚಯ ಹಾಗೂ ಏನಾದರೂ ಸಮಸ್ಯೆಗಳಿದ್ದರೆ ನಮೂದಿಸಬೇಕು. ಸಾರ್ವಜನಿಕರಿಗೆ ಆಸನದ ವ್ಯವಸ್ಥೆಯೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸಿ ವಿಲೇವಾರಿಗೆ ಕ್ರಮ ವಹಿಸಬೆಕು ಎಂದು ಸೂಚಿಸಿದರು.
ಸಭೆಯಲ್ಲಿ ಚಲನವಲನ ವಹಿ, ಅಧಿಕಾರಿಗಳ ಪ್ರವಾಸ ವಿವರ, ಬಯೋಮೆಟ್ರಿಕ್ ಹಾಜರಾತಿ, ಇ- ಆಫೀಸ್‌ನಲ್ಲಿ ಕಡತಗಳ ನಿರ್ವಹಣೆ, ಸಿಸಿ ಕ್ಯಾಮರಾ ಅಳವಡಿಕೆ ಕುರಿತು ಚರ್ಚಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಮಾತನಾಡಿ ಸರ್ಕಾರಿ ಕೆಲಸ ದೇವರ ಕೆಲಸವಾಗಿದ್ದು ಅಧಿಕಾರಿಗಳು ಜವಾಬ್ದಾರಿಯಿಂದ ಕಚೇರಿ ಕೆಲಸ ನಿರ್ವಹಿಸಬೇಕು. ವಿಳಂಬ ನೀತಿ ಅನುಸರಿಸಬಾರದು ಎಂದರು.ಸಭೆಯಲ್ಲಿ ಉಪವಿಭಾಗಾದಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ಡಿಡಿಎಲ್‌ಆರ್. ರುದ್ರಣ್ಣಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 