ಬೆಳಗಾವಿ, 10: ಚುನಾವಣಾ ಸಂದರ್ಭದಲ್ಲಿ ಯಾವುದೇ ಅಭ್ಯಥರ್ಿಗಳು ಜಾತಿ-ಧರ್ಮದ ಆಧಾರದ ಮೇಲೆ ಮತಯಾಚನೆ ಅಥವಾ ಹಣ, ಮತ್ತಿತರ ಆಮಿಷವೊಡ್ಡಿದರೆ ಅಂತಹವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ವಿಶಾಲ್ ಆರ್. ಅವರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಏ.10) ನಡೆದ ಅಭ್ಯಥರ್ಿಗಳ ಹಾಗೂ ಚುನಾವಣಾ ಏಜೆಂಟರುಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಪ್ರಚಾರಕ್ಕೆ ಲಭ್ಯವಿರುವ ಸಾರ್ವಜನಿಕ ಮೈದಾನ ಅಥವಾ ಸ್ಥಳಗಳನ್ನು ಎಲ್ಲ ಪಕ್ಷಗಳಿಗೆ ಸಮಾನವಾಗಿ ಒದಗಿಸುವ ಪ್ರಯತ್ನ ಮಾಡಲಾಗುತ್ತದೆ. ಆದರೆ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಪ್ರಚಾರಕ್ಕೆ ಅನುಮತಿ ಪಡೆದುಕೊಂಡಿರುವ ಅಭ್ಯಥರ್ಿಗಳು ತಮ್ಮ ಬಗ್ಗೆ ಮಾತ್ರ ಪ್ರಚಾರ ಮಾಡಲು ಅವಕಾಶವಿದ್ದು, ಇನ್ನೊಬ್ಬರ ಕುರಿತು ಪ್ರಚಾರ ಕೈಗೊಂಡರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಬ್ಯಾಲೆಟ್ ಯೂನಿಟ್ ಗೆ ಪ್ರಸ್ತಾವ:
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟಾರೆ 57 ಅಭ್ಯಥರ್ಿಗಳು ಕಣದಲ್ಲಿರುವುದರಿಂದ ಇನ್ನೂ 7152 ಬ್ಯಾಲೆಟ್ ಯೂನಿಟ್ ಗಳನ್ನು ಪೂರೈಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಡಾ.ವಿಶಾಲ್ ತಿಳಿಸಿದರು.
ಅಗತ್ಯವಿರುವ ಯೂನಿಟ್ ಗಳು ಪೂರೈಕೆ ಆದ ತಕ್ಷಣವೇ ಮಾನ್ಯತೆ ಪಡೆದಿರುವ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ನಿಯಮಾವಳಿ ಪ್ರಕಾರ ಮೊದಲ ಮತ್ತು ದ್ವಿತೀಯ ಹಂತದ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಸಲಾಗುವುದು ಎಂದು ವಿವರಿಸಿದರು.
ಚುನಾವಣಾ ಖಚರ್ುವೆಚ್ಚಗಳಿಗೆ ಸಂಬಂಧಿಸಿದಂತೆ ಈಗಾಗಲೇ ತಿಳಿಸಿರುವಂತೆ ಲೆಕ್ಕಪತ್ರಗಳನ್ನು ನಿಯಮಿತವಾಗಿ ವೆಚ್ಚ ವೀಕ್ಚಕರ ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚುನಾವಣಾ ವೀಕ್ಷಕರಾದ ರಾಜೀವಚಂದ್ರ ದುಬೆ ಅವರು, ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತವನ್ನು ಗಮನಿಸಲಾಗುತ್ತಿದ್ದು, ಯಾವುದೇ ದೂರುಗಳಿದ್ದರೆ ಅಥವಾ ಲೋಪದೋಷ ಕಂಡುಬಂದರೆ ನೇರವಾಗಿ ತಮ್ಮ ಗಮನಕ್ಕೂ ತರಬಹುದು ಎಂದು ಹೇಳಿದರು.
ಪಕ್ಷೇತರ ಅಭ್ಯಥರ್ಿಗಳು, ವಿವಿಧ ಪಕ್ಷಗಳ ಚುನಾವಣಾ ಏಜೆಂಟರು ಸಭೆಯಲ್ಲಿ ಭಾಗವಹಿಸಿದ್ದರು