ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ
Restrictions within 200 m of examination centers
ಬಳ್ಳಾರಿ 21: ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಫೆ.22 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ (ಪತ್ರಿಕೆ-01) ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 04.30 ರವರೆಗೆ (ಪತ್ರಿಕೆ-02) ಕಲ್ಯಾಣ ಕರ್ನಾಟಕ ವೃಂದದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 