ನಿವೃತ್ತ ಶಿಕ್ಷಕ ಹಿರೇಮಠಗೆ ಸನ್ಮಾನ
Retired teacher Hiremath felicitated
ತಾಳಿಕೋಟಿ 07: ದೇವರ ಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಸುವರ್ಣ ಮಹೋತ್ಸವ, ಪ್ರೌಢಶಾಲೆಯ ನೂತನ ಕಟ್ಟಡ, ವಸತಿ ನಿಲಯ ಉದ್ಘಾಟನೆ ಹಾಗೂ ’ಸುವರ್ಣ ಸಂತಸ’ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ತಾಳಿಕೋಟಿ ಪಟ್ಟಣದ ನಿವೃತ್ತ ಮುಖ್ಯ ಶಿಕ್ಷಕರಾದ ಸಿ.ಎಂ.ಹಿರೇಮಠ ಇವರು ಸ್ಮರಣ ಸಂಚಿಕೆಗೆ ಲೇಖನಗಳನ್ನು ನೀಡಿದ್ದಕ್ಕಾಗಿ ಅವರನ್ನು ಜಾಲಹಳ್ಳಿಯ ಪರಮ ಪೂಜ್ಯರು ಸನ್ಮಾನಿಸಿ ಆಶೀರ್ವಾದ ನೀಡಿ ಅಭಿನಂದನಾ ಪತ್ರ ವಿತರಿಸಿದರು. ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ರಾಜುಗೌಡ ಸಂ.ನಾಡಗೌಡ್ರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವಾರು ಪರಮ ಪೂಜ್ಯರು, ರಾಜಕೀಯ ಮುಖಂಡರು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 