ತಮಿಳುನಾಡಿನಲ್ಲಿ ನಿವೃತ್ತಿ ವಯಸ್ಸು 58 ರಿಂದ 59 ವರ್ಷಕ್ಕೆ ಏರಿಕೆ

ಚೆನ್ನೈ, ಮೇ 7, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ತಮಿಳುನಾಡು ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ 58ರಿಂದ 59 ವರ್ಷಕ್ಕೆ ಹೆಚ್ಚಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಸರ್ಕಾರಿ ನೌಕರರು, ಸಾರ್ವಜನಿಕ ವಲಯದ ಸಂಸ್ಥೆಗಳು, ಶಾಲಾ-ಕಾಲೇಜುಗಳ ಎಲ್ಲ ಶಿಕ್ಷಕರು ಮತ್ತು ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ಇದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶ ತಕ್ಷಣವೇ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.