ರೈತರ ಜಮೀನು ವಾಪಸ್ಸು ನೀಡಿ, ಇಲ್ಲವಾದಲ್ಲಿ ಸೂಕ್ತ ಭೂ ಬೆಲೆ ನೀಡಿ : ಕರವೇ ಅಧ್ಯಕ್ಷ ಸಂಪತ್ ಆಗ್ರಹ
Return the land to the farmers, or else pay the appropriate land price: Karave President Sampath dem
ಲೋಕದರ್ಶನ ವರದಿ
ಕಂಪ್ಲಿ 20: ಮಿತ್ತಲ್ಗೆ ನೀಡಿದ್ದ ರೈತರ ಭೂಮಿಯನ್ನು ಕೆಐಎಡಿಬಿ ಸರ್ಕಾರದೊಂದಿಗೆ ಶಾಮಿಲಾಗಿ ಜಿಂದಾಲ್ಗೆ ಪರಭಾರೆ ಮಾಡಿದೆ. ಕೂಡಲೇ ಸರ್ಕಾರ ಮಧ್ಯಸ್ಥಿಕೆವಹಿಸಿ ಇಲ್ಲಿನ ಸಾವಿರಾರು ರೈತರ ಭೂಮಿಯನ್ನು ವಾಪಸ್ಸು ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಭೂ ಪರಿಹಾರ ಒದಗಿಸಬೇಕು ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ(ಯುವಸೇನೆ)ಯ ಕುಡತಿನಿ ಘಟಕ ಅಧ್ಯಕ್ಷ ಸಂಪತ್ ಒತ್ತಾಯಿಸಿದರು ಕುಡತಿನಿ ಪಟ್ಟಣದಲ್ಲಿ ಬುಧವಾರದಂದು ಭೂ ಸಂತ್ರಸ್ತ ರೈತರಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಕಳೆದ ಮೂರು ವರ್ಷದಿಂದ ನಿರಂತರವಾಗಿ ಹಮ್ಮಿಕೊಂಡು ಇಂದಿಗೆ 1251ನೇ ದಿನ ಮತ್ತು 9ನೇ ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಭಾಗವಹಿಸಿ, ಬೆಂಬಲ ನೀಡಿದ ನಂತರ ಮಾತನಾಡಿ, ಕೆಐಎಡಿಬಿಯು ಮಿತ್ತಲ್ ಕಂಪನಿಗಾಗಿ 2012ರಲ್ಲಿ ಸ್ವಾಧೀನ ಮಾಡಿಕೊಂಡಿದ್ದ ಸಾವಿರಾರು ಎಕರೆಯಷ್ಟು ಜಮೀನನ್ನು ಈಗ ಅಕ್ರಮವಾಗಿ ಜಿಂದಾಲ್ ಕಂಪನಿಗೆ ನೀಡಲಾಗಿದೆ. ಯಾವ ಉದ್ದೇಶಕ್ಕೆ ವಶಕ್ಕೆ ಪಡೆಯಲಾಗಿತ್ತೋ ಅದೇ ಉದ್ದೇಶಕ್ಕೆ ಭೂಮಿ ಬಳಸಬೇಕಿತ್ತು.
ಈಗ ಜಿಂದಾಲ್ಗೆ ಹಸ್ತಾಂತರ ಮಾಡುತ್ತಿರುವುದು ರೈತರ ಹಿತಾಸಕ್ತಿಗೆ ವಿರುದ್ಧವಾದೆ. ಭೂ ಪರಭಾರೆ ವಿರೋಧಿಸಿ ನಿರಂತರವಾಗಿ ಧರಣಿ ಸತ್ಯಾಗ್ರಹ ಮತ್ತು ಉಪವಾಸದ ಹೋರಾಟ ಮಾಡುತ್ತಿದ್ದಾರೆ. ಆದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಕುಮ್ಮಕ್ಕು ನೀಡಿ ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಭೂ ಪ್ರವೇಶದ ವೇಳೆ ಬೈಪಾಸ್ ರಸ್ತೆಯಲ್ಲಿ ರೈತರನ್ನು ತಡೆಗಟ್ಟಿ, ರೈತರಿಗೆ ನ್ಯಾಯ ಸಿಗದ ರೀತಿಯಲ್ಲಿ ಪಿತೂರಿ ನಡೆಸಲಾಗುತ್ತಿದೆ. ಎಷ್ಟೇ ಪಿತೂರಿ ಮತ್ತು ಷಡ್ಯಾಂತ್ರ ಮಾಡಿದರೂ, ರೈತರ ಹೋರಾಟ ನಿಲ್ಲದು. ಈ ಹೋರಾಟಕ್ಕೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ(ಯುವಸೇನೆ)ಯ ಬೆಂಬಲ ಸದಾ ಇದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮೀರಿಯಲ ಶ್ರೀನಿವಾಸ, ಜಮ್ಮಯ್ಯ, ಎಂ.ಮಾರೇಶ್, ಟೈಗರ್, ರವಿ, ಅಂಬರೀಶ್, ತಿಮ್ಮಪ್ಪ, ಗಂಗಾಧರ, ಭಾವಿ ಶಿವಕುಮಾರ್, ಕಾಸಿಂ, ರಾಮಣ್ಣ, ಜಂಗ್ಲಿ ಸಾಬ್, ದಿವಾಕರಬಾಬು, ವೀರಭದ್ರ, ವಿವೇಕಾನಂದ, ಹಾಲಪ್ಪ ಗೀರೀಶ್, ರೈತರು ಮತ್ತು ರೈತ ಮಹಿಳೆಯರು ಹಾಗೂ ಇತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 