ರೇವತಿ ಇಟಗಿ ಅವರಿಗೆ ಪ್ರತಿಭಾ ಪುರಸ್ಕಾರ
Revathi Itagi receives Pratibha Award
ವಿಜಯಪುರ, 21 ; ಜಿಲ್ಲಾ ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘ (ರಿ) ಪ್ರಥಮ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಇವರ ವತಿಯಿಂದ 2024 ಮತ್ತು 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಜಯಪುರ ನಗರದಲ್ಲಿ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿತ್ತು.
ಆ ಪುರಸ್ಕಾರಕ್ಕೆ ನಮ್ಮಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಕುಮಾರಿ ರೇವತಿ ತಂದೆ ನರಸಪ್ಪ ಇಟಗಿ ಅವರು ದ್ವಿತೀಯ ಪಿಯುಸಿಯಲ್ಲಿ 487 ಅಂಕ ಪಡೆದು ಶೇಕಡ 81.17ಅ ಪಡೆದು ಆಯ್ಕೆಯಾಗಿದ್ದು ದಿನಾಂಕ 20.07.2025 ರವಿವಾರದಂದು ವಿಜಯಪುರ ನಗರದಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರಿ ರೇವತಿ ತಂದೆ ನರಸಪ್ಪ ಇಟಗಿ ಇವರಿಗೆ ನೆನಪಿನ ಕಾಣಿಕೆ ಮತ್ತು ಅಭಿನಂದನ ಪತ್ರವನ್ನು ನೀಡಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ (ಯತ್ನಾಳ) ಶಾಸಕರು ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ಮತ್ತು ವಿಠ್ಠಲ ಕಟಕಧೋಂಡ ಶಾಸಕರು ನಾಗಠಾಣ ವಿಧಾನಸಭಾ ಕ್ಷೇತ್ರ ಮತ್ತು ಅಧ್ಯಕ್ಷರು ಪ್ರಶಾಂತ ಕಿರಣಗಿ ಪ್ರಧಾನ ಕಾರ್ಯದರ್ಶಿ ಸುನಿಲ್ ಜೈನಾಪುರ ಇನ್ನು ಜಿಲ್ಲಾ ಪದಾಧಿಕಾರಿಗಳು ಸಲಹಾ ಸಮಿತಿ ಸದಸ್ಯರು ತಾಲೂಕ ಅಧ್ಯಕ್ಷರು ಇನ್ನೂ ಪರಶುರಾಮ ಹುಬ್ಬಳ್ಳಿ ಯಮನೂರು ಹುಬ್ಬಳ್ಳಿ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 