ಬೆಳಗಾವಿಯಲ್ಲಿ 5 ವರ್ಷದ ಬಳಿಕ ಕಂದಾಯ ನೌಕರರ ಕ್ರೀಟಾಕೂಟ
Revenue employees' sports meet after 5 years in Belgaum
ಬೆಳಗಾವಿ 28: ಸದಾ ಕಾರ್ಯದ ಒತ್ತಡ, ಕಡತಗಳ ಮಧ್ಯೆ ಮುಳುಗಿರುವ ನೌಕರರಿಗೆ ಮನೋಲ್ಲಾಸ ನೀಡಲು ಕೆಲಸದ ಒತ್ತಡ ಕಡಿಮೆ ಮಾಡಲು ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕಂದಾಯ ಇಲಾಖೆ ನೌಕರರಿಗೆ ಕಳೆದ 5 ವರ್ಷಗಳ ನಂತರ ಈ ಸದವಕಾಶ ದೊರೆತಿದ್ದು, ಇಲಾಖೆಯಲ್ಲಿ ಕ್ರೀಡಾಕೂಟದ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಆಟವಾಡಿ. ಕ್ರೀಡಾಕೂಟವನ್ನು ಆಯೋಜಿಸಿದ ಜಿಲ್ಲಾಡಳಿತಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಪ್ರಾದೇಶಿಕ ಆಯುಕ್ತ ಕೆ. ಎಂ. ಜಾನಕಿ ಅವರು ಹೇಳಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025-26ನೇ ಸಾಲಿನ ಕಂದಾಯ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಕಂದಾಯ ನೌಕರರು ಆಕರ್ಷಕ ಪಥ ಸಂಚಲನ ನಡೆಸಿ ಅತಿಥಿಗಳಿಗೆ ಗೌರವ ಸಲ್ಲಿಸಿದರು. ಬೆಳಗಾವಿ ಪ್ರಾದೇಶಿಕ ಆಯುಕ್ತ ಕೆ. ಎಂ. ಜಾನಕಿ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಬೆಳಗಾವಿ ನಗರ ಪೋಲಿಸ್ ಆಯುಕ್ತರಾದ ಭೂಷಣ್ ಬೋರಸೆ ಅವರು ಕ್ರೀಡಾ ಜ್ಯೋತಿಯನ್ನು ಬರಮಾಡಿಕೊಂಡರು. ನಂತರ ಕ್ರೀಡಾ ಫಲಕ ಅನಾವರಣಗೊಳಿಸಿ, ಬಲೂನ್ ಹಾರಿಸುವುದರ ಮೂಲಕ ಕ್ರೀಡಾಕೂಟವನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಕ್ರೀಡಾಕೂಟದ ಶಪಥವನ್ನು ಬೋಧಿಸಲಾಯಿತು. ನಂತರ ಬೆಳಗಾವಿ ಆರ್. ಕೆ.ಎಂ ಜಾನಕಿ, ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್, ಕಮಿಷ್ನರ್ ಭೂಷಣ್ ಬೋರಸೆ, ಎಸ್ಪಿ. ಕೆ. ರಾಮರಾಜನ್ ಅವರು ಸ್ವತಃ ವ್ಹಾಲಿಬಾಲ್ ಆಡುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆಯನ್ನು ನೀಡಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ವಹಿಸಿದ್ದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಮರಾಜನ್ ಕೆ. ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾಪಟುಗಳನ್ನು ಹುರಿದುಂಬಿಸಿದರು. ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರು, ಆರೋಗ್ಯ ಅಮೂಲ್ಯವಾದದ್ದಾಗಿದೆ. ಪ್ರತಿದಿನ ಒತ್ತಡದ ಜೀವನದಲ್ಲಿರುವ ಸರ್ಕಾರಿ ನೌಕರರು, ಬೆಳಿಗ್ಗೆ ಅಥವಾ ಸಂಜೆ ಕೆಲ ಕಾಲ ಆರೋಗ್ಯಕ್ಕಾಗಿ ಸಮಯವನ್ನು ಮೀಸಲಿಡಿ, ವ್ಯಾಯಾಮವನ್ನು ಮಾಡಿ ಎಂದು ಕರೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕೆ. ಅವರು ಆಟದಲ್ಲಿನ ಸೋಲು-ಗೆಲುವು ನಮಗೆ ಪ್ರೇರಣೆಯನ್ನು ನೀಡುತ್ತದೆ. ಯಾವುದೇ ತರಬೇತಿ ಪಡೆಯದೇ ಅತ್ಯಂತ ಚೆನ್ನಾಗಿ ಪಥಸಂಚಲನವನ್ನು ಮಾಡಲಾಗಿದೆ ಎಂದು ಪ್ರಶಂಸಿಸಿದರು. ಕೋವಿಡ್ ನಂತರ ಮೊದಲ ಬಾರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಲ್ಲ ಇಲಾಖೆಗಳು ಒಂದಾಗಿ ಕಾರ್ಯನಿರ್ವಹಿಸುತ್ತಿರುವುದು ಮಾದರಿಯಾಗಿದೆ. ಎಲ್ಲ ನೌಕರರು ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗಿಯಾಗಬೇಕೆಂದು ಹೇಳಿದರು.
ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯ್ಕ ಅವರು ಸ್ವಾಗತಿಸಿದರು. ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಅವರು ವಂದನಾರೆ್ಣ ಮಾಡಿದರು. ವಿವಿಧ ತಂಡಗಳು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದವು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 