ಬರ ಘೋಷಣೆ ನಿಯಮ ಮರುಪರೀಶೀಲಿಸಿ ನ್ಯಾಯಯುತ ಪರಿಹಾರ ಒದಗಿಸಿ: ಎಂ.ಬಿ. ಪಾಟೀಲ
Review drought declaration norms and provide fair relief: M.B. Patil
ವಿಜಯಪುರ, ಸೆ. 9: ಕೇಂದ್ರ ಸರ್ಕಾರವು ರಾಜ್ಯದ ರೈತರ ಹಿತದೃಷ್ಟಿಯಿಂದ ಬರ ಘೋಷಣೆಯ ನಿಯಮಗಳನ್ನು ಮರುಪರೀಶೀಲಿಸಿ, ರಾಜ್ಯಕ್ಕೆ ನ್ಯಾಯಯುತ ಪರಿಹಾರ ಒದಗಿಸಬೇಕು ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯವು ಹಿಂದೆಂದೂ ಕಂಡು-ಕೇಳರಿಯದ ರೀತಿಯಲ್ಲಿ ಭೀಕರ ಬರಗಾಲದ ಹೊಡೆತಕ್ಕೆ ಸಿಲುಕಿದೆ. ಕಂದಾಯ ಇಲಾಖೆಯ ಜವಾಬ್ದಾರಿಯೊಂದಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದಾರೆ.
ರಾಜ್ಯದ ಒಟ್ಟು 200 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ನಿರ್ಧರಿಸಲಾಗಿದ್ದು, ಹಂತ ಹಂತವಾಗಿ ಈ ಘೋಷಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿರುವ ತಾಲೂಕುಗಳನ್ನು ಹೊರತುಪಡಿಸಿ ಉಳಿದ 13 ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಬೇಕು. ರೈತರು ಆತಂಕಪಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ರೈತರ ನೆರವಿಗೆ ಎಲ್ಲ ರೀತಿಯಲ್ಲೂ ಬದ್ಧವಾಗಿದೆ ಎಂದು ಎಂ.ಬಿ. ಪಾಟೀಲ ಭರವಸೆ ನೀಡಿದ್ದಾರೆ.
ಸಂಕಷ್ಟದ ಸಂದರ್ಭದಲ್ಲಿ ರೈತರ ನೆರವಿಗೆ ನಿಲ್ಲಬೇಕಾದ ಕೇಂದ್ರ ಸರ್ಕಾರದ ಬರ ಘೋಷಣೆಯ ಕಠಿಣ ಮಾನದಂಡಗಳಿಂದಾಗಿ ರಾಜ್ಯದ ಅರ್ಹ ರೈತರಿಗೆ ಪರಿಹಾರ ವಿಳಂಬವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
2020ರಲ್ಲಿ ಜಾರಿಗೊಳಿಸಲಾದ ಬರ ಮಾರ್ಗಸೂಚಿಗಳನ್ವಯ ಮಳೆ ಕೊರತೆಯ ಜೊತೆಗೆ ಉಪಗ್ರಹ ಆಧಾರಿತ ಗಿಜರಜಣಚಿಣಠ ಋಜಛಿ, ಮಣ್ಣಿನ ತೇವಾಂಶದ ಕೊರತೆ, ಬೆಳೆ ಹಾನಿಯ ಪ್ರಮಾಣ ಸೇರಿದಂತೆ ಹಲವು ತಾಂತ್ರಿಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪರಿಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಇಂತಹ ತಾಂತ್ರಿಕ ಮಾನದಂಡಗಳ ಕಾರಣದಿಂದ ವಾಸ್ತವವಾಗಿ ಬರ ಎದುರಿಸುತ್ತಿರುವ ಹಲವು ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಿ ಸಕಾಲದಲ್ಲಿ ಪರಿಹಾರ ಒದಗಿಸಲು ರಾಜ್ಯ ಸರ್ಕಾರಗಳಿಗೆ ತೊಂದರೆಯಾಗುತ್ತಿದೆ. ಬರದ ಮಾನದಂಡಗಳು ರೈತರ ಬದುಕನ್ನು ರಕ್ಷಿಸುವಂತಿರಬೇಕು. ರೈತರ ನೆರವಿಗೆ ಅವು ಅಡ್ಡಿಯಾಗಬಾರದು ಎಂದು ಸಚಿವರು ಹೇಳಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ, ಬರ ಘೋಷಣೆಯ ಕಠಿಣ ಮಾನದಂಡಗಳನ್ನು ಸಡಿಲಿಸುವುದು ಇಂದಿನ ಅಗತ್ಯವಾಗಿದೆ. ಅರ್ಹ ರೈತರಿಗೆ ಕೇಂದ್ರದ ಪರಿಹಾರ ಸಕಾಲದಲ್ಲಿ ತಲುಪುವಂತೆ ನಿಯಮಗಳನ್ನು ಪರಿಷ್ಕರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರಗಳ ಕರ್ತವ್ಯ ಮಾತ್ರವಲ್ಲ, ಮಾನವೀಯ ಹೊಣೆಗಾರಿಕೆಯೂ ಹೌದು. ಕರ್ನಾಟಕದ ರೈತರ ಹಿತದೃಷ್ಟಿಯಿಂದ ಬರ ಘೋಷಣೆಯ ನಿಯಮಗಳನ್ನು ಮರುಪರೀಶೀಲಿಸಿ ರಾಜ್ಯಕ್ಕೆ ನ್ಯಾಯಯುತ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 