ನವದೆಹಲಿ, ಏಪ್ರಿಲ್ 2, ಕೊವಿದ್ -19 ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಪರಾಮರ್ಶೆ ಸಭೆ ನಡೆಸಿದರು.ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಹರ್ಷವರ್ಧನ್ ಈ ವೇಳೆ ಉಪಸ್ಥಿತರಿದ್ದರು.ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ವಿಡಿಯೋ ಕಾನ್ಫರೆನ್ಸಿಂಗ್ ನಲ್ಲಿ ಪಾಲ್ಗೊಂಡಿದ್ದರು. ದೇಶದಲ್ಲಿ ಹೊಸ 298 ಪ್ರಕರಣಗಳು ದೃಢಪಡುವುದರೊಂದಿಗೆ ಸೋಂಕಿತ ಒಟ್ಟು ಪ್ರಕರಣಗಳ ಸಂಖ್ಯೆ 1,965 ಕ್ಕೆ ಏರಿದೆ. ದೇಶಾದ್ಯಂತ ಇನ್ನೂ 12 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 50 ಕ್ಕೆ ತಲುಪಿದೆ ಎಂದು ಸರ್ಕಾರ ತಿಳಿಸಿದೆ.ಗುರುವಾರ ಬೆಳಿಗ್ಗೆವರೆಗೆ ಸಕ್ರಿಯ ಕೊವಿದ್-19 ಪ್ರಕರಣಗಳ ಸಂಖ್ಯೆ 1,764 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು 150 ಪ್ರಕರಣಗಳನ್ನು ಗುಣಪಡಿಸಲಾಗಿದ್ದು, ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಎಂದು ಸಚಿವಾಲಯ ತಿಳಿಸಿದೆ.