ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ
Review of the progress of guarantee schemes
ಇಂಡಿ 09 : ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರೀಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಪ್ರಗತಿ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು. ಅಧ್ಯಕ್ಷ ಪ್ರಶಾಂತ ಕಾಳೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿವೆ. ಇನ್ನೂ ಹೆಚ್ಚಿನ ಅರ್ಹ ಫಲಾನುಭವಿಗಳನ್ನು ಯೋಜನೆಗಳ ವ್ಯಾಪ್ತಿಗೆ ತರಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಭೆಯ ಆರಂಭದಲ್ಲಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹದೇವಪ್ಪ ಏವೂರ ಅವರು ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನು ಸ್ವಾಗತಿಸಿದರು. ಸಮಿತಿ ಸದಸ್ಯರಾದ ಸಂಜಯಕುಮಾರ್ ನಾಯ್ಕೋಡಿ, ಸತೀಶ ಹತ್ತಿ, ಶೈಲಜಾ ಜಾಧವ, ಪ್ರಭು ಕುಂಬಾರ, ಸಂಕೇತ ಜೋಶಿ, ಭೀಮರಾಯ ಮೇತ್ರಿ, ಅಜಿತ್ ಜೀರಗಿ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 