ಜಿಲ್ಲೆಯಲ್ಲಿ ಗೃಹ ಸಚಿವರ ಪರಿಷ್ಕೃತ ಪ್ರವಾಸ.

Revised tour of the Home Minister in the district.

ಜಿಲ್ಲೆಯಲ್ಲಿ ಗೃಹ ಸಚಿವರ ಪರಿಷ್ಕೃತ ಪ್ರವಾಸ. 

ಕಾರವಾರ, ಮಾ.25 :- ರಾಜ್ಯದ ಗೃಹ ಸಚಿವ ಡಾ: ಜಿ.ಪರಮೇಶ್ವರ ಅವರು ಮಾರ್ಚ್‌ 26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಪ್ರವಾಸದ ವಿವರಗಳು ಇಂತಿವೆ.. 

ಮಾರ್ಚ್‌ 26 ರಂದು ಮಧ್ಯಾಹ್ನ 2.30 ರಿಂದ 3.30 ಗಂಟೆಯವರೆಗೆ, ಎಸ್‌.ಪಿ. ಕಚೇರಿಯಲ್ಲಿ ವಿಧಾನಸಭಾ/ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಖರೀದಿಸಿ ಪೊಲೀಸ್ ಇಲಾಖೆಗೆ ನೀಡಿರುವ ಹೊಸ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮ, ಶಿರಸಿ ಪಟ್ಟಣದ ಟ್ರಾಫಿಕ್ ಪೊಲೀಸ್ ಠಾಣೆಯ ವಿದ್ಯುಕ್ತ ಚಾಲನೆ (ಖಿಡಿಠರ ಘಇಃಅಂಖಖಿ), ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕದಿಂದ ಚಿತ್ರಿಸಲಾಗಿರುವ ವಿಡಿಯೋಗಳ ಬಿಡುಗಡೆ, ರೂ.1.15 ಕೋಟಿ ವೆಚ್ಚದಲ್ಲಿ ನವೀಕರಿಸಲಾದ ಜಿಲ್ಲಾ ಪೊಲೀಸ್ ಕಚೇರಿಯ ವಿವಿಧ ವಿಭಾಗಗಳ ಉದ್ಘಾಟನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ನಂತರ ವಾಸ್ತವ್ಯ ಮಾಡುವರು.