ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ
Revised tour program of Dr. Nagalakshmi Chaudhary, Chairperson of the State Women's Commission
ಲೋಕದರ್ಶನ ವರದಿರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ
ಕೊಪ್ಪಳ 03 : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರವರಿ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ಫೆ.5 ರಂದು ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸುವರು. ಬೆಳಿಗ್ಗೆ 11 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಮಧ್ಯಾಹ್ನ 12.45 ಗಂಟೆಗೆ ಕಾರಟಗಿ ತಾಲ್ಲೂಕಿನ ಈಳಿಗನೂರು ಗ್ರಾಮಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಈಳಿಗನೂರಿನಿಂದ ಹೊರಟು ಮಧ್ಯಾಹ್ನ 3.30 ಗಂಟೆಗೆ ಕಾರಟಗಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು. ಸಂಜೆ 4.30 ಗಂಟೆಗೆ ಕಾರಟಗಿ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5.30 ಗಂಟೆಗೆ ಕಾರಟಗಿಯಿಂದ ಹೊರಟು ಸಂಜೆ 6 ಗಂಟೆಗೆ ಗಂಗಾವತಿಯ ಹಿಂದುಳಿದ ವರ್ಗಗಳ ಡಿ.ದೇವರಾಜ ಅರಸು ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಸಂಜೆ 7 ಗಂಟೆಗೆ ಗಂಗಾವತಿಯಿಂದ ಹೊರಟು 8 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಅಂದು ರಾತ್ರಿ ಕೊಪ್ಪಳದಲ್ಲಿಯೇ ವಾಸ್ತವ್ಯ ಮಾಡುವರು.
ಫೆ.6 ರಂದು ಬೆಳಿಗ್ಗೆ 10 ಗಂಟೆಗೆ ಅಧ್ಯಕ್ಷರು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ ಕಓಖಊ ಅಧಿನಿಯಮ 2013ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಧ್ಯಾಹ್ನ 12 ಗಂಟೆಗೆ ಕೊಪ್ಪಳದ ವಾರ್ಡ್ ನಂ.28, ಸಿದ್ದೇಶ್ವರ ನಗರದ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ, ಅಲೆಮಾರಿ ಸಮುದಾಯದ ಮಹಿಳೆಯರ ಸಮಸ್ಯೆಗಳನ್ನು ಆಲಿಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸ್ನೇಹ ಸಂಸ್ಥೆ ಕೊಪ್ಪಳ ಇವರು ಆಯೋಜಿಸಿರುವ ದೇವದಾಸಿ ಮಹಿಳೆಯರೊಂದಿಗೆ ಸಂವಾದ ನಡೆಸುವರು. ಸಂಜೆ 5 ಗಂಟೆಗೆ ಕೊಪ್ಪಳದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 6 ಗಂಟೆಗೆ ಕೊಪ್ಪಳದ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿನಿಲಯಕ್ಕೆ ಭೇಟಿ ನೀಡುವರು. ಅಂದು ರಾತ್ರಿ ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು.
ಫೆ.7 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಮಹಿಳಾ ಸ್ಪಂದನಾ ಕಾರ್ಯಕ್ರಮ ಹಾಗೂ ಮಹಿಳಾ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ವಿವಿಧ ಮಾಧ್ಯಮದವರೊಂದಿಗೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 6.30 ಗಂಟೆಗೆ ಕೊಪ್ಪಳದಿಂದ ರೈಲಿನ ಮೂಲಕ ನಿರ್ಗಮಿಸಿ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 