ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಜನಪರ ಕ್ರಮ - ರಾಘವೇಂದ್ರ ಪಾಲನಕರ
Revision of Gruha Jyothi and Gruha Lakshmi schemes is a pro-people measure – Raghavendra Palanakar
ಗದಗ 2: ರಾಜ್ಯ ಸರ್ಕಾರ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಪರಿಷ್ಕರಿಸಲು ಕೈಗೊಂಡಿರುವ ಕ್ರಮವು ನೈಜ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಷುಷಹಿ್ಪೈಳಿಷ್ಫ್ಘ್ತ ನಗರ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ರಾಘವೇಂದ್ರ ಪಾಲನಕರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ಪಂಚ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿವೆ. ಆದರೆ ಕೆಲವು ಕಡೆಗಳಲ್ಲಿ ಅನರ್ಹರು ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ ಎಂದು ಹೇಳಿದರು.
ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಪರಿಷ್ಕರಣೆಯೊಂದಿಗೆ ನಾಗರಿಕರ ಮಾಹಿತಿಯನ್ನು ಸಮರ್ಕವಾಗಿ ಪರೀಶೀಲಿಸುವ ಮೂಲಕ ನೈಜ ಫಲಾನುಭವಿಗಳನ್ನು ಗುರುತಿಸಲು ಅನುಕೂಲವಾಗಲಿದೆ. ಇದರಿಂದ ಸರ್ಕಾರದ ಸೌಲಭ್ಯಗಳು ಅರ್ಹರಿಗೆ ಮಾತ್ರ ತಲುಪುವಂತೆ ಮಾಡಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಜಾತಿ ಆಧಾರಿತ ಸಮಗ್ರ ಮಾಹಿತಿ ಸಂಗ್ರಹದಿಂದ ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ನಿಖರ ಮಾಹಿತಿ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ಸರ್ಕಾರಕ್ಕೆ ನೆರವಾಗಲಿದೆ ಎಂದು ರಾಘವೇಂದ್ರ ಪಾಲನಕರ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 