ಬೆಂಗಳೂರು, ಜೂ.28: ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರನ್ನು ನಿಯಂತ್ರಿಸಲು ನಿಗದಿಪಡಿಸಲಾಗಿದ್ದ ಕ್ವಾರಂಟೈನ್ ಮಾರ್ಗಸೂಚಿಯನ್ನು ಮತ್ತೆ ಪರಿಷ್ಕರಿಸಿದೆ.ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ ವ್ಯಕ್ತಿಗಳಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಗೃಹ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
ಮಹಾರಾಷ್ಟ್ರ ರಾಜ್ಯವನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಆಗಮಿಸುವ ವ್ಯಕ್ತಿಗಳಿಗೆ 14 ದಿನಗಳ ಗೃಹ ಕ್ವಾರಂಟೈನ್ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆಕ್ವಾರಂಟೈನ್ ಕಣ್ಗಾವಲನ್ನು ತಾಂತ್ರಿಕತೆ ಹಾಗೂ ಕಣ್ಗಾವಲು ತಂಡ ಹೆಚ್ಚಿಸುವ ಮೂಲಕ ಸದೃಢಗೊಳಿಸಲಾಗಿದೆ. ಈಹಿನ್ನೆಲೆಯಲ್ಲಿ ಪ್ರಸ್ತುತ ಆದೇಶ ಜಾರಿಯಲ್ಲಿರುವ ಕ್ವಾರಂಟೈನ್ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆಉಳಿದ ಎಲ್ಲಾ ಷರತ್ತುಗಳು ಹಿಂದಿನ ಆದೇಶದಂತೆ ಮುಂದುವರಿಯಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.