ಗಣೇಶೋತ್ಸವದಲ್ಲಿ ಹಳೆ ಸಂಪ್ರದಾಯಕ್ಕೆ ಮರುಜೀವ ನೀಡಿ: ಪಿಎಸ್‌ಐ ಪ್ರೀತಮ್ ನಾಯಕ
Revive old traditions during Ganeshotsava: PSI Preetham Nayak
ಲೋಕದರ್ಶನ ವರದಿ
ಮಹಾಲಿಂಗಪುರ 10 : ಗಣೇಶೋತ್ಸವ ಕೇವಲ ವಿಜೃಂಭಣೆಯ ಆಚರಣೆಯಾಗದೆ, ಶಾಂತಿ, ಸೌಹಾರ್ದತೆ, ಭಕ್ತಿಭಾವ ಹಾಗೂ ನಮ್ಮ ನಾಡಿನ ಸಾಂಪ್ರದಾಯಿಕ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬವಾಗಬೇಕು. ಆಧುನಿಕತೆಯ ಹೆಸರಿನಲ್ಲಿ ಡಿಜೆ ಸಂಸ್ಕೃತಿಗೆ ಮಾರುಹೋಗುವ ಬದಲು ಕರಡಿ ಮಜಲು, ಡೋಲು ಕುಣಿತ, ದೋಲ್ ತಾಷಾ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲಾ ಪ್ರಕಾರಗಳಿಗೆ ಆದ್ಯತೆ ನೀಡುವ ಮೂಲಕ ಹಳೆ ಸಂಸ್ಕೃತಿಗೆ ಮರುಜೀವ ನೀಡಬೇಕು ಎಂದು ಮಹಾಲಿಂಗಪುರ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಪ್ರೀತಮ್ ನಾಯಕ ಹೇಳಿದರು. ಗಣೇಶೋತ್ಸವದ ಹಿನ್ನೆಲೆಯಲ್ಲಿ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಕಾಲಕ್ಕೆ ತಕ್ಕಂತೆ ಬದಲಾವಣೆ ಅನಿವಾರ್ಯ. ಆದರೆ ಬದಲಾವಣೆಯ ಭರದಲ್ಲಿ ನಮ್ಮ ಮೂಲ ಸಂಸ್ಕೃತಿ, ಪರಂಪರೆ ಹಾಗೂ ಸಾಂಪ್ರದಾಯಿಕ ಆಚರಣೆಗಳನ್ನು ಮರೆಯಬಾರದು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಡಿಜೆ ಮೂಲಕ ಶಬ್ದ ಮಾಲಿನ್ಯ ಉಂಟು ಮಾಡುವ ಬದಲು ಸಾಂಪ್ರದಾಯಿಕ ಕಲಾ ತಂಡಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 