ಗೌರಿ ಲಂಕೇಶ್ ಹತ್ಯೆ ಆರೋಪಿ ರಿಷಿಕೇಶ್ 15 ದಿನ ಪೊಲೀಸ್ ಕಸ್ಟಡಿಗೆ
ಬೆಂಗಳೂರು, ಜ 13: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಂಧಿತನಾಗಿದ್ದ ರಿಷಿಕೇಶ್ ದೇವ್ಡೇಕರ್ ಅಲಿಯಾಸ್ ಮುರುಳಿಯನ್ನು ಇಂದು ಎಸ್ ಐಟಿ ತಂಡ ಸಿ.ಸಿ.ಎಚ್ -1 ನ್ಯಾಯಾಲಯದ ಮುಂದೆ ಹಾಜರುಪಡಿಸಿತು.
ಎಸ್ಐಟಿಯ ಕೋರಿಕೆಯ ಆಧಾರದ ಮೇಲೆ ನ್ಯಾಯಾಲಯ ರಿಷಿಕೇಶ್ ನನ್ನು ಇದೇ ತಿಂಗಳು 27 ರವರೆಗೆ 15 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.
ಇದೇ ತಿಂಗಳು 9ರಂದು ಎಸ್ಐಟಿ ತಂಡ ಜಾರ್ಖಂಡ್ ನಲ್ಲಿ ರಿಷಿಕೇಶ್ ನನ್ನು ಬಂಧಿಸಿ, ಜಾರ್ಖಂಡ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಆತನನ್ನು ವಶಕ್ಕೆ ಪಡೆದಿದ್ದರು.
ಜಾರ್ಖಂಡ್ ನಿಂದ ರೈಲಿನ ಮೂಲಕ ರಿಷಿಕೇಶ್ ನನ್ನು ಎಸ್ ಐಟಿ ಅಧಿಕಾರಿಗಳು ಭಾನುವಾರ ರಾತ್ರಿ ಬೆಂಗಳೂರಿಗೆ ಕರೆತಂದಿದ್ದರು.
ರಿಷಿಕೇಶ್ ಜಾರ್ಖಂಡ್ ನ ಧನ್ಬಾದ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದ್ದು, ಆತ ಸುಮಾರು 1 ವರ್ಷದಿಂದ ಕುಟುಂಬದವರ ಸಂಪರ್ಕದಿಂದ ದೂರವಿದ್ದ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಈತ ಕೂಡ ಪ್ರಮುಖ ಆರೋಪಿಯಾಗಿದ್ದು, ಕೃತ್ಯಕ್ಕೆ ಬಳಸಿದ್ದ ಗನ್ ಅನ್ನು ಸಾಕ್ಷ್ಯ ನಾಶಪಡಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 