ನದಿಗಳ ನೀರಿನ ಮಟ್ಟದಲ್ಲಿ ಏರಿಕೆ: ಸೇತುವೆಗಳು ಜಲಾವೃತ
Rising river water levels: Bridges flooded
ಚಿಕ್ಕೋಡಿ 27: ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿರುವ ಪರಿಣಾಮ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ಮತ್ತು ದೂಧಗಂಗ ನದಿ ಮೂಲಕ 50 ಸಾವಿರ ಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ, ದೂದಗಂಗಾ ಮತ್ತು ವೇಧಗಂಗಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಜಲಾವೃತಗೊಂಡಿವೆ.
ಕಳೆದ ಎರಡು ದಿನಗಳಿಂದ ನೆರೆಯ ಮಹಾರಾಷ್ಟ್ರದ ಕೋಯ್ನಾ, ಮಹಾಬಳೇಶ್ವರ, ರಾಧಾನಗರಿ ಮತ್ತು ಪಾಟಗಾಂವ ಹಾಗೂ ಕೊಲ್ಲಾಪೂರ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಇದರಿಂದ ರಾಜ್ಯದ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.
ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ 23 ಸಾವಿರ ಕ್ಯೂಸೆಕ್, ಧೂಮ್ 7200 ಕ್ಯೂಸೆಕ್, ಕಣೇರ-4200 ಕ್ಯೂಸೆಕ್, ತಾರಲಿ-4400 ಕ್ಯೂಸೆಕ್, ವೀರ್ 14 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಹರಿದು ಬರುವುದರಿಂದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿಯ ನದಿಯ ಕೆಳ ಹಂತದ ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿವೆ.
ಆರು ಸೇತುವೆ ಜಲಾವೃತ: ಕೃಷ್ಣಾ ನದಿಯ ಕಲ್ಲೋಳ-ಯಡೂರ, ಮಾಂಜರಿ-ಬಾ.ಸವದತ್ತಿ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇಧಗಂಗಾ ನದಿಯ ಬಾರವಾಡ-ಕುನ್ನೂರ, ಭೋಜವಾಡಿ-ಶಿವಾಪೂರವಾಡಿ ಸೇತುವೆ ಜಲಾವೃತಗೊಂಡು ಸಂಚಾರ ಕಡಿತಗೊಂಡಿವೆ.
ನೆರೆಯ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ ಮೂಲಕ 82 ಸಾವಿರ ಕ್ಯೂಸೆಕ್ ನೀರು ಹರಿದು ಬಂದರೆ ದೂಧಗಂಗಾ ಮತ್ತು ವೇಧಗಂಗಾ ನದಿಯ ಮೂಲಕ 15 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ 97 ಸಾವಿರ ಕ್ಯೂಸೆಕ್ ನೀರು ಹರಿದು ಆಲಮಟ್ಟಿ ಜಲಾಶಯಕ್ಕೆ ಹೋಗುತ್ತದೆ.
ಮಳೆ ವಿವರ- ಕೋಯ್ನಾ-112 ಮಿಮೀ, ನವಜಾ-152 ಮಿಮೀ, ಮಹಾಬಳೇಶ್ವರ-202 ಮಿಮೀ ಮತ್ತು ಚಿಕ್ಕೋಡಿ ಭಾಗದಲ್ಲಿಯೂ ಜಿಟಿಜಿಟಿ ಮಳೆಯಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 