ಲಾಗೋಸ್, ಫೆ 10, ನೈಜೀರಿಯಾದ ನೈಋತ್ಯ ಒಸುನ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿ ಆಳವಾದ ಚರಂಡಿಗೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು ಇತರ ಒಂಭತ್ತು ಜನರು ಗಾಯಗೊಂಡಿದ್ದಾರೆ.ಮಿತಿಗೂ ಹೆಚ್ಚಿನ ಸಂಖ್ಯೆಯ ಜನರನ್ನು ಹೊತ್ತೊಯ್ಯುವುದು, ರಸ್ತೆಗಳ ದುಃಸ್ಥಿತಿ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ನೈಜೀರಿಯಾದಲ್ಲಿ ಆಗ್ಗಾಗ್ಗೆ ಅಪಘಾತಗಳು ವರದಿಯಾಗುತ್ತವೆ.