ರಸ್ತೆ ಸುರಕ್ಷತೆ ಕುರಿತು ಜಾಗೃತಿ ಜಾಥಾ
Road Safety Awareness Rally
ಲೋಕದರ್ಶನ ವರದಿ
ಧಾರವಾಡ 28: ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಹಾಗೂ ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಶ್ರೀ ಸಾಯಿ ಪದವಿ ಪೂರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ ಆಯೋಜಿಸಲಾಯಿತು.
ಜಾಥಾಕ್ಕೆ ಸಂಚಾರಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಡಿ.ವಿ. ಗಾಳರಡ್ಡಿ, ಪೊಲೀಸ್ ಕಾನ್ಸ್ಟೆಬಲ್ ಮಲ್ಲಪ್ಪ ಹವಳಗೋಳ ಹಾಗೂ ಸಂಸ್ಥೆಯ ಅಧ್ಯಕ್ಷೆ ಡಾ. ವೀಣಾ ಬಿರಾದಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿದರು. ಅಲ್ಲದೆ, "ಹೆಲ್ಮೆಟ್ ಧರಿಸಿ ಹಿ ಜೀವ ಉಳಿಸಿ", "ಸೀಟ್ಬೆಲ್ಟ್ ಕಡ್ಡಾಯವಾಗಿ ಬಳಸಿ", "ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ" ಹಾಗೂ "ಸಂಚಾರ ನಿಯಮಗಳನ್ನು ಪಾಲಿಸಿ ಹಿ ಸುರಕ್ಷಿತವಾಗಿ ಮನೆ ಸೇರಿ" ಎಂಬ ಸಂದೇಶಗಳನ್ನು ಸಾರ್ವಜನಿಕರಿಗೆ ತಲುಪಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಪ್ರಾಚಾರ್ಯ ನಾಗರಾಜ ಶಿರೂರ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಬಾಪು ಮೊರಂಕರ, ಉಪನ್ಯಾಸಕರಾದ ಮಂಜುನಾಥ ಶಿರಾಳಕೊಪ್ಪ, ರೇಷ್ಮಾ ಹಂಚಿನಮನಿ, ಮಹಾಂತೇಶಗೌಡ ರಾಯನಗೌಡ್ರ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 