ಧುಳಗನವಾಡಿಯಲ್ಲಿ 80 ಲಕ್ಷ ರೂ. ರಸ್ತೆ-ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Road and drainage development work worth Rs. 80 lakh launched in Dhulganwadi
ಚಿಕ್ಕೋಡಿ 05: ನಾಯಿಂಗ್ಲಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಧುಳಗನವಾಡಿ ಗ್ರಾಮದಲ್ಲಿ ಪರಿಮೀತಿಯ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಅಧಿಕೃತ ಚಾಲನೆ ದೊರಕಿತು.
ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಮತ್ತು ಶಾಸಕರಾದ ಗಣೇಶ ಹುಕ್ಕೇರಿ ಅವರ ನಿರಂತರ ಪ್ರಯತ್ನದ ಫಲವಾಗಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ 80 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಗ್ರಾಮದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಈ ಅಭಿವೃದ್ಧಿ ಕಾಮಗಾರಿಗೆ ಇಂದು ಮುಖಂಡರ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು.
ಮುಖಂಡ ಶಿವಕುಮಾರ ಕಮತೆ ಮಾತನಾಡಿ ಧುಳಗನವಾಡಿ ಗ್ರಾಮ ಪರಿಮೀತಿಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಯ ಬೇಡಿಕೆ ಹಿನ್ನೆಲೆಯಲ್ಲಿ, ಇಂದು ಈ ಮಹತ್ವದ ಯೋಜನೆಗೆ ಚಾಲನೆ ದೊರೆತಿದ್ದು, ಗ್ರಾಮಾಭಿವೃದ್ಧಿಗೆ ಹೊಸ ಶಕ್ತಿ ನೀಡಲಿದೆ. ಜನರ ಸಮಸ್ಯೆಯನ್ನು ಮನಗಂಡು ಕ್ರಮ ಕೈಗೊಂಡ ಪ್ರಕಾಶ ಹುಕ್ಕೇರಿ ಹಾಗೂ ಗಣೇಶ ಹುಕ್ಕೇರಿ ಅವರ ಜನಪರ ನಿಲುವಿಗೆ ಗ್ರಾಮಸ್ಥರ ಪರವಾಗಿ ಹೃತ್ಪೂರ್ವಕ ಅಭಿನಂದನೆ ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ಮುಖಂಡರಾದ ಅಜೀತ ಯಳ್ಳೂರೆ, ಕಾಕಾಸಾಬ ಚಿಮನೆ, ದೀಲೀಪ ಮಗದುಮ್ಮ, ಅಣ್ಣಾಸಾಬ ಕಮತೆ, ಆನಂದ ಮಗದುಮ, ಶಿದಗೌಡ ಕಮತೆ, ಸದಾಶಿವ ಖೋತ, ಮಹಾದೇವ ಜೋಡಟ್ಟಿ, ರಾಜಕುಮಾರ ಖೋತ, ಅಣ್ಣಪ್ಪ ಜೋಡಟ್ಟಿ, ಬಸಪ್ಪ ಖೋತ, ರಾವಸಾಬ ಚಿಮನೆ, ಚೇತನ ಮಗದುಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 