ಎರಡು ತಿಂಗಳಿನಿಂದ ರಸ್ತೆ ಬಂದ್: ರೈತರು, ಶಾಲಾ ಮಕ್ಕಳಿಗೆ ತೀವ್ರ ತೊಂದರೆ
Road closed for two months: Farmers and school children face severe hardship
ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯರಸ್ತೆ ತಡೆದು ಪ್ರತಿಭಟನೆ ಎಚ್ಚರಿಕೆ
ಪಾಲಬಾವಿ, ಆ.7: ಸಂಪರ್ಕಿಸುವ ತೋಟದ ರಸ್ತೆಯನ್ನು ಕಳೆದ ಎರಡು ತಿಂಗಳಿನಿಂದ ಬಂದ್ ಮಾಡಿರುವುದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಶಾಲಾ ಮಕ್ಕಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.
ಕೆಲವು ರೈತರು ರಸ್ತೆಯ ಮಧ್ಯಭಾಗದಲ್ಲಿ ಶೆಡ್ ನಿರ್ಮಿಸಿ ಹಾಗೂ ಗರಸು ಸುರಿದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇದರಿಂದ ಕೃಷಿ ಕಾರ್ಯಗಳಿಗೆ ಬಳಸುವ ಟ್ರ್ಯಕ್ಟರ್ಗಳು, ಇತರೆ ವಾಹನಗಳು ಹಾಗೂ ಶಾಲಾ ಮಕ್ಕಳನ್ನು ಕರೆದೊಯ್ಯುವ ಬಸ್ಗಳ ಸಂಚಾರಕ್ಕೂ ಅಡಚಣೆ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ತಹಶೀಲ್ದಾರ್ ಹಾಗೂ ಸಂಬಂಧಿತ ಕಂದಾಯ ಇಲಾಖೆಯ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರೈತರಾದ ಮಾರುತಿ ಸಕಾಲಟ್ಟಿ ಮತ್ತು ದಾವಲಸಾಬ ಮೂಡಲಗಿ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರೈತರು, ಕೆಲವರು ವೈಯಕ್ತಿಕ ಪ್ರತಿಷ್ಠೆಗಾಗಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿ ಇತರ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ನಕ್ಷೆ ಪ್ರಕಾರ ರಸ್ತೆ ಗುರುತಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲವಾದರೆ ್ಕ್ದಷ್ಛಘ್ಯಳಹ್ಕ್ಡ್ಣ್ಚ್ತಿದಿಷ್ದ್ಘೃ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತರಾದ ಮಾರುತಿ ಸಕಾಲಟ್ಟಿ, ದಾವಲಸಾಬ ಮೂಡಲಗಿ, ಮಹಾಲಿಂಗಯ್ಯ ಹಿರೇಮಠ, ಮಂಜುನಾಥ ಕಳಸಣ್ಣವರ, ಜಗದೀಶ ಕಿತ್ತೂರ, ಸೈಯದ್ ಮೂಡಲಗಿ, ಶಿವಪ್ಪ ಮಾದಗುಣ ಹಾಗೂ ಮಲಿಕ್ ಮುಜಾವರ್ ಉಪಸ್ಥಿತರಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 