ನೇಜ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ : ಗುಣಮಟ್ಟ ಕಾಪಾಡಲು ಸೂಚನೆ
Road development works kick off in Neja village: Instructions to maintain quality
ಲೋಕದರ್ಶನ ವರದಿ
ಚಿಕ್ಕೋಡಿ 22: ತಾಲೂಕಿನ ನೇಜ ಗ್ರಾಮದಲ್ಲಿ ?1.41ಕೋಟಿ ವೆಚ್ಚದಲ್ಲಿ ಎರಡು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಸಕ ಗಣೇಶ ಹುಕ್ಕೇರಿ ಹಾಗೂ ತಮ್ಮ ಪ್ರಯತ್ನದಿಂದ ನೇಜ ಗ್ರಾಮದ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ?70.00 ಲಕ್ಷ ಮತ್ತು ನೇಜ ಸದಲಗಾ ರಸ್ತೆಯಿಂದ ಹರಗಾಜೆ ಕೋಡಿವರೆಗೆ ರಸ್ತೆ ಸುಧಾರಣೆಗೆ 71.00 ಲಕ್ಷ ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು. ಈಗಾಗಲೇ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಇದೇ ವೇಳೆ, ನೇಜ ಗ್ರಾಮದಲ್ಲಿ ?50.00 ಲಕ್ಷ ಅನುದಾನದಲ್ಲಿ ರಸ್ತೆ ಸುಧಾರಣೆ ಕಾಮಗಾರಿ ಪ್ರಗತಿಯಲ್ಲಿದ್ದು, ಶ್ರೀ ಹಾಲಸಿದ್ಧನಾಥ ದೇವಸ್ಥಾನದ ಕಟ್ಟಡ ಕಾಮಗಾರಿಗೆ 15.00 ಲಕ್ಷ ಮತ್ತು ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ಕಟ್ಟಡ ಪೂರ್ಣಗೊಳಿಸಲು ?10.00 ಲಕ್ಷ ಅನುದಾನ ಮಂಜೂರಾಗಿದೆ ಎಂದು ಹೇಳಿದರು.ಕಾಮಗಾರಿಗಳನ್ನು ವಿಳಂಬ ಮಾಡದೆ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟ ಕಾಪಾಡುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರಸ್ತುತ ಸಾಲಿನಲ್ಲಿ ನೇಜ ಗ್ರಾಮದಲ್ಲಿ ಸರ್ಕಾರದಿಂದ ವಿವಿಧ ಯೋಜನೆಗಳಡಿ ?4.76 ಕೋಟಿ ಅನುದಾನ ಮಂಜೂರಾಗಿದ್ದು, ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜು ಪಾಟೀಲ, ಪ್ರಕಾಶ್ ಮಗದುಮ್ಮ, ಅರುಣ ಬೋನೆ, ಸದಾನಂದ ಸ್ವಾಮಿ, ಅಪ್ಪಾಸಾಬ ಸುಟ್ಟಟ್ಟಿ, ರಾಜು ನಾಗೂರ, ಅಜಯಸಿಂಗ್ ಸಿತೋಳೆ, ಕುಂದನ ಕಾಂಬಳೆ, ಶಕೀಲ ಬೇಗ್, ರಮೇಶ್ ಖೋತ, ಇರಗೌಡ ಪಾಟೀಲ, ರಾಜು ಚಿಂಚಣೆ, ಉಮೇಶ್ ಪಾಟೀಲ, ಬಸವರಾಜ ಮುದ್ದಾಯಿ, ರಮೇಶ್ ಪಾಟೀಲ, ಬಾಲು ಕುರಾಡೆ, ಸಂತೋಷ ಹಿರೇಮಠ, ಶ್ರೀಶೈಲ ಪಾಟೀಲ, ಬಾಬಾ ಗಾಯಕವಾಡ, ಬೀರಾ ಹೇರವಾಡೆ, ಚೆನ್ನಪ್ಪ ಗೀಲಾಳೆ, ಅಣ್ಣಪ್ಪ ಚೆಂಗೌಡನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 