ವಾಳಕಿ ಗ್ರಾಮದಲ್ಲಿ 1 ಕೋಟಿ ರೂ. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಾಳಕಿ ಗ್ರಾಮದಲ್ಲಿ 1 ಕೋಟಿ ರೂ. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ Road development works worth Rs 1 crore launched in Valaki village

ಚಿಕ್ಕೋಡಿ 30: ತಾಲೂಕಿನ ವಾಳಕಿ ಗ್ರಾಮದಲ್ಲಿ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಮಂಜೂರಾದ 1 ಕೋಟಿ ರೂ. ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಹಿರಿಯ ಮುಖಂಡರಾದ ಅಣ್ಣಾಸಾಬ ನಾಯಿಕ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. 50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆಯ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಪಂಗಡದ ಕಾಲೋನಿಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಗಿದೆ. 

ಇದರಿಂದ ಗ್ರಾಮೀಣ ಜನತೆ, ವಿಶೇಷವಾಗಿ ರೈತರು ಮತ್ತು ವಿದ್ಯಾರ್ಥಿಗಳು ಸುಗಮ ಸಂಚಾರಕ್ಕೆ ಅನುಕೂಲ ಹೊಂದಲಿದ್ದಾರೆ. ಅಲ್ಲದೇ ಗ್ರಾಮಾಂತರ ಪ್ರದೇಶಗಳಲ್ಲಿ ದಿನನಿತ್ಯ ಜೀವನ ಸುಲಭವಾಗಲು ಹಾಗೂ ಶುದ್ಧ ಪರಿಸರ ನಿರ್ಮಾಣಕ್ಕೆ ಸಹಕಾರಿಯಾಗಲಿದೆ.ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಸಾಬ ನಾಯಿಕ ಅವರು, ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ   ಗಣೇಶ ಹುಕ್ಕೇರಿ ಅವರ ಪ್ರಯತ್ನದಿಂದ 1 ಕೋಟಿ ರೂ. ಅನುದಾನ ಮಂಜೂರಾಗಿರುವುದಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ.  

ಈ ಅನುದಾನವನ್ನು ಸಮರ​‍್ಕವಾಗಿ ಬಳಸಿಕೊಂಡು ಗ್ರಾಮೀಣ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾಕರ ಮದರಖಂಡಿ, ಉಪಾಧ್ಯಕ್ಷರಾದ ಮಹಾದೇವ ಕವಲಾಪುರೆ, ರಾಹುಲ ಡೋಣೆ, ಖಂಡೇರಾವ ಪಾಟೀಲ, ಸಂತೋಷ ಖೋತ, ಬಬನ ನಾಯಿಕ, ಸಿದ್ದಲಿಂಗ ಚಿಗರೆ, ಬಾಲಚಂದ್ರ ಸ್ವಾಮಿ, ರತನ ತರಾಳ, ರಾಹುಲ ಲಾಟಕರ, ಬಾಳಾಸಾಹೇಬ ಹಿರೇಕುಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಬಾಕ್ಸ್‌ ನಾನು ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ಗ್ರಾಮೀಣ ಅಭಿವೃದ್ಧಿಗೆ ಸದಾ ಆದ್ಯತೆ ನೀಡುತ್ತಿದ್ದೇವೆ. ವಾಳಕಿ ಸೇರಿದಂತೆ ಚಿಕ್ಕೋಡಿ ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ಸಮಾನ ಅವಕಾಶ ಸಿಗಬೇಕು ಎನ್ನುವುದು ನಮ್ಮ ಉದ್ದೇಶ. ರಸ್ತೆಗಳು, ಚರಂಡಿಗಳು, ಕುಡಿಯುವ ನೀರು ಹಾಗೂ ಇತರ ಮೂಲಭೂತ ಸೌಕರ್ಯಗಳ ಮೂಲಕ ಗ್ರಾಮೀಣ ಜನರ ಜೀವನಮಟ್ಟವನ್ನು ಸುಧಾರಿಸುವುದು ನಮ್ಮ ಬದ್ಧತೆ. ಈ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಾಗ ಗ್ರಾಮಸ್ಥರ ಬದುಕಿನಲ್ಲಿ ಸ್ಪಷ್ಟ ಬದಲಾವಣೆ ತರುವುದರಲ್ಲಿ ಸಂದೇಹವಿಲ್ಲ.   ಪ್ರಕಾಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳು.*ಪೋಟೋ: ಚಿಕ್ಕೋಡಿ: ವಾಳಕಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದರು.