ಅರಳಿಕಟ್ಟಿ ಗ್ರಾಮದಲ್ಲಿ ರಸ್ತೆ ಉದ್ಘಾಟನೆ
Road inauguration in Aralikatti village
ಬೆಳಗಾವಿ 06: ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು 1.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಸ್ತೆ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳು ಅತ್ಯಂತ ಅಗತ್ಯವಾಗಿವೆ. ಜನರ ಬೇಡಿಕೆಗೆ ಸ್ಪಂದಿಸಿ ಅಗತ್ಯವಿರುವ ಕಡೆ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಆದ್ಯತೆ ನೀಡುತ್ತಿದ್ದಾರೆ ಎಂದರು.
ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದ್ದು, ಮಳೆಗಾಲದಲ್ಲಿಯೂ ಸುಗಮ ಸಂಚಾರಕ್ಕೆ ನೆರವಾಗಲಿದೆ. ಮುಂದಿನ ದಿನಗಳಲ್ಲಿಯೂ ಗ್ರಾಮಾಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ರಸ್ತೆ ನಿರ್ಮಾಣದಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 