ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಕಾರ್ಯಕ್ರಮ
Road safety awareness program for drivers
ದಾಂಡೇಲಿ 23: ದಾಂಡೇಲಿಯ ನಗರ ಪೋಲಿಸ್ ಠಾಣೆಯ ಆಶ್ರಯದಲ್ಲಿ ಬಸ್ ನಿಲ್ದಾಣದ ಎದುರಿನ ಆಟೋ ನಿಲ್ದಾಣದಲ್ಲಿ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿ.ಪಿ.ಐ ಶಿವಾನಂದ ಅಂಬಿಗೇರ ಅವರು ರಿಕ್ಷಾ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರನ್ನುದ್ದೇಶಿಸಿ ಮಾತನಾಡಿ ಜನರ ಜೀವವನ್ನು ಉಳಿಸುವಲ್ಲಿ ಚಾಲಕರ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬ ಚಾಲಕ ಸಂಚಾರಿ ನಿಯಮಗಳನ್ನು ಅರಿತಿರಬೇಕು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಾಹನಗಳ ದಾಖಲೆಗಳನ್ನು ಸರಿಯಾಗಿ ಇಟ್ಟು ವಿಮಾ ಪತ್ರ ತಪ್ಪದೆಹೊಂದಿರಬೇಕು ಎಂದು ನುಡಿದರು. ಈ ಸಂದರ್ಭದಲ್ಲಿ ನಗರ ಠಾಣೆಯ ಪಿ.ಎಸ್.ಐ ಅಮೀನ ಅತ್ತಾರ ಮತ್ತು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 