ಹೆಗಡೆ ಗ್ರಾಮದ ರಸ್ತೆ ಅಗಲೀಕರಣವಾಗಲಿ: ಡಿಸಿ ಲಕ್ಷ್ಮಿಪ್ರಿಯಾಗೆ ಮನವಿ
Road widening in Hegde village: Appeal to DC Lakshmipriya
ಕಾರವಾರ 28: ಕುಮಟಾದಿಂದ ಹೆಗಡೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಗಲೀಕರಣಗೊಳಿಸಿ, ಹೊಸ ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಹೆಗಡೆ ಗ್ರಾಮದ ನಾಗರಿಕರು ಸೋಮವಾರ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಿದರು. ಹೆಗಡೆ ಗ್ರಾಮದ ಅಘನಾಶಿನಿ ನದಿಗೆ ನೂತನ ಸೇತುವೆ ನಿರ್ಮಾಣವಾಗಿದ್ದು, ಮಿರ್ಜಾನ, ಹಿರೇಗುತ್ತಿ, ಗೋಕರ್ಣ, ಅಂಕೋಲಾ ಹಾಗೂ ಕಾರವಾರ ಭಾಗಗಳಿಗೆ ಸಂಚರಿಸುವವರಿಗೆ ಹೆಚ್ಚಿನ ಅನುಕೂಲವಾಗಿದೆ.
ಮಿರ್ಜಾನದಿಂದ ಕುಮಟಾಕ್ಕೆ ಈ ಮಾರ್ಗದ ಮೂಲಕ ಸಂಚರಿಸಿದರೆ ಸುಮಾರು 9 ಕಿ.ಮೀ. ಅಂತರ ಉಳಿತಾಯವಾಗಲಿದೆ. ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದರೂ ಎರಡೂ ಬದಿಯ ಸಂಪರ್ಕ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಪ್ರಸ್ತುತ ಮಣ್ಣು ಹಾಗೂ ಜಲ್ಲಿ ಹಾಕಲಾಗಿದ್ದು, ರಸ್ತೆ ನಿರ್ಮಾಣ ಬಾಕಿಯಿದೆ. ಆದಾಗ್ಯೂ ಈ ಮಾರ್ಗದಲ್ಲಿ ವಾಹನಗಳ ಸಂಚಾರ ಈಗಾಗಲೇ ಹೆಚ್ಚಾಗಿದೆ. ಹೆಗಡೆ ಗ್ರಾಮದ ರಸ್ತೆ ಹೊಂಡಮಯವಾಗಿದ್ದು, ಕೆಲವೆಡೆ ಅತ್ಯಂತ ಕಿರಿದಾಗಿದೆ.
ವಾಹನಗಳ ದಟ್ಟಣೆಯಿಂದ ಗ್ರಾಮಸ್ಥರು ಹಾಗೂ ಮಕ್ಕಳು ರಸ್ತೆಯಲ್ಲಿ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳು ಎದುರಾದಾಗ ಪಕ್ಕದ ಕಾಂಪೌಂಡ್ಗೆ ತಾಗುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಆದ್ದರಿಂದ ಇಲಾಖೆಯ ನಿಯಮಾನುಸಾರ ಕಿರಿದಾದ ಸ್ಥಳಗಳಲ್ಲಿ ರಸ್ತೆ ಅಗಲೀಕರಣ ಮಾಡಿ, ಬಳಿಕ ಸುಸಜ್ಜಿತ ಹೊಸ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು, ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಥಳ ಪರೀಶೀಲನೆ ನಡೆಸಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿ ಭರವಸೆ ನೀಡಿದರು.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 