ಮುತಗಾ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ
Road works begin in Muthaga village
ಬೆಳಗಾವಿ 01: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಶಿವಾಜಿ ಗಲ್ಲಿ ಹಾಗೂ ಎಕ್ಸ್ಟೆನ್ಶನ್ ಪ್ರದೇಶಗಳಲ್ಲಿ ಸುಮಾರು ರೂ.50 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅಧಿಕೃತ ಚಾಲನೆ ನೀಡಲಾಯಿತು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು ಹಾಗೂ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸುವ ಮೂಲಕ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂಕಲ್ಪವಾಗಿದೆ. ಅದೇ ದಿಟ್ಟ ಉದ್ದೇಶದಡಿ ಈ ರಸ್ತೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಗ್ರಾಮದ ಹಿರಿಯರು, ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 