ರಸ್ತೆ ಗುಣಮಟ್ಟದಿಂದ ಕೂಡಿರಲಿ: ಶಾಸಕ ಅಶೋಕ ಮನಗೂಳಿ
Roads should be of good quality: MLA Ashok Managuli
ಸಿಂದಗಿ 10: ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾದ ಈ ರಸ್ತೆಯನ್ನು ಗುತ್ತಿಗೆದಾರರು ಅತ್ಯಂತ ಗುಣಮಟ್ಟದಿಂದ ಮಾಡಬೇಕು. ಲೋಕೋಪಯೋಗಿ ಇಲಾಖೆಯ ಸಚಿವರು ಈಗಾಗಲೇ ಸಿಂದಗಿ ಮತಕ್ಷೇತ್ರದ ಸಿಸಿ ರಸ್ತೆ ಮತ್ತು ಡಾಂಬರೀಕರಣಕ್ಕಾಗಿ ರೂ.27ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಲೋಕೋಪಯೋಗಿ ಇಲಾಖೆ ಸಿಂದಗಿ ವತಿಯಿಂದ ರೂ.2ಕೋಟಿ ಅನುದಾನ ಲೆಕ್ಕಶಿರ್ಷಿಕೆ 2023-24ನೆಯ ಸಾಲಿನ 50:54ಅಪೆಂಡೆಕ್ಸ್-ಇ ಯೋಜನೆ ಅಡಿಯಲ್ಲಿ ಹಮ್ಮಿಕೊಂಡ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಿಂದಗಿ ನಗರ 97ಕಿಮೀ ರಸ್ತೆಯನ್ನು ಹೊಂದಿದ್ದು, ಅದರಲ್ಲಿ ಕೇವಲ 15-20ಕಿಮೀ ಮಾತ್ರ ಸಿಸಿ ರಸ್ತೆಗಳಾಗಿವೆ. ಇನ್ನೂ 70-80ಕಿಮೀ ಸಿಸಿ ರಸ್ತೆ ಆಗಬೇಕಿದೆ. 3ವರ್ಷದ ಕಾಲಾವಧಿಯಲ್ಲಿ ಅತ್ಯಂತ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಪುರಸಭೆ ನಾಮನಿರ್ದೇಶೀತ ಸದಸ್ಯ ಸಾಯಬಣ್ಣ ಪುರದಾಳ, ರವಿ ಬಮ್ಮಣ್ಣಿ ಮಾತನಾಡಿ, ಸಿಂದಗಿ ಮತಕ್ಷೇತ್ರದಲ್ಲಿ ಅನೇಕ ಕಡೆಗಳಲ್ಲಿ ಸಿಸಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿ ಉತ್ತಮ ರೀತಿಯಲ್ಲಿ ಗುಣಮಟ್ಟದಿಂದ ಕೂಡಿರಲಿ ಎಂದರು.
ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಲೋಕೋಪಯೋಗಿ ಇಲಾಖೆ ಎಇಇ ಅರುಣಕುಮಾರ, ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಮಹಾನಂದ ಬಮ್ಮಣ್ಣಿ, ಸುನಂದಾ ಯಂಪುರೆ, ಅಂಬಿಕಾ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 