ನಗರದಲ್ಲಿ ಕಳ್ಳರ ಕೈಚಳಕ, ಪೊಲೀಸರ ಬಲೆಗೆ ಸಿಕ್ಕಿಬಿದ್ದ ಕಳ್ಳರು
ಲೋಕದರ್ಶನವರದಿ
ರಾಣೇಬೆನ್ನೂರು೧೭: ಸರಗಳ್ಳತನ ಮತ್ತು ಮನೆಗಳ್ಳತನ ಮಾಡುತ್ತಿದ್ದ ನಾಲ್ಕು ಜನ ಕಳ್ಳರನ್ನು ಬಂಧಿಸಿ ಅವರಿಂದ ಅಂದಾಜು 5 ಲಕ್ಷ ರೂ ಮೌಲ್ಯದ ಬಂಗಾರದ ಆಭರಣ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ 2 ಮೋಟಾರ್ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಾವೇರಿ ಜಿಲ್ಲಾ ಎಸ್ಪಿ. ಕೆ.ಸಿ.ದೇವರಾಜು ಹೇಳಿದರು.
ಗುರುವಾರ ಶಹರ ಪೊಲೀಸ್ ಠಾಣೆಯಲ್ಲಿ ಈ ಕುರಿತು ವಿವರವಾದ ಮಾಹಿತಿ ನೀಡಿದರು. ರಾಣೇಬೆನ್ನೂರಿನ ಗೌರಿಶಂಕರ ನಗರ, ವಿಕಾಸ ನಗರ, ಮಾರುತಿ ನಗರ, ಶ್ರೀರಾಮ ನಗರ ಹಾಗೂ ಹರಿಹರದಲ್ಲಿ ಸರಗಳ್ಳತನ ಮಾಡಿದ್ದ ಈ ನಾಲ್ವರು ಕಳ್ಳರಿಂದ 170 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಈ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು, ವಿವರವಾದ ಮಾಹಿತಿಯೊಂದಿಗೆ ಪೊಲೀಸರು ತನಿಖೆ ಕೈಗೊಂಡಾಗ ಈ ಆರೋಪಿಗಳು ಬಲೆಗೆ ಬಿದ್ದಿದ್ದು, 5 ಕಡೆ ಸರಗಳ್ಳತನ ಮಾಡಿದ್ದು ನಾವೇ ಎಂದು ತಪ್ಪೊಪ್ಪಿಕೊಂಡಿರುವುದಾಗಿ ಹೇಳಿದ್ದಾರೆ ಎಂದರು.
ಈ ಕಳ್ಳತನದ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದರು. ಸಾರ್ವಜನಿಕರೂ ಸಹ ಅದರಲ್ಲೂ ವಿಶೇಷವಾಗಿ ಮಹಿಳೆಯರು ಮೈ ಮೇಲೆ ಆಭರಣಗಳನ್ನು ಧರಿಸಿಕೊಂಡಾಗ ಜಾಗೃಕತೆಯಿಂದೆ ಇರಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಎ.ಎಸ್ಪಿ ಮಲ್ಲಿಕಾಜರ್ುನ ಬಾಲದಂಡಿ, ಡಿವೈಎಸ್ಪಿ ಟಿ.ವಿ.ಸುರೇಶ, ಶಹರ ಸಿಪಿಐ ಲಿಂಗನಗೌಡ ನೆಗಳೂರ, ಪಿಎಸ್ಐ ಪ್ರಭು ಕೆಳಗಿನಮನಿ, ಎನ್.ಎಂ.ಉದಗಟ್ಟಿ, ಎಎಸ್ಐ ಕೋಮಲಾಚಾರ್ಯ, ಪೊಲೀಸರಾದ ಕೆ.ಎಚ್.ಸವೂರ, ವಿಶ್ವನಾಥ, ಎಚ್.ಎನ್.ದನವಿನ ಮನಿ, ಮಂಜುನಾಥ ಕುಂಟಗೌಡ್ರ, ಹೆಚ್ ಶಿವರಾಜ, ಎಚ್.ವೈ ಮಂಜುನಾಥ, ರಾಜು ವಡ್ಡರ, ಕೆ.ಎಫ್ ಕೆಂಗೊಂಡ, ರಮೇಶ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 