ಬೆಂಗಳೂರು, ಮೇ.19,ದರೋಡೆಗೆ ಸಂಚು ರೂಪಿಸಿದ್ದ ಐವರು ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮಾರತ್ ಹಳ್ಳಿಯ ಸಂತೋಷ್ ಕುಮಾರ್ (26), ಶಶಿಕುಮಾರ್ (28), ಭಾಸ್ಕರ್ ಆರ್ (19), ಸ್ಟೀಫನ್ ರಾಜ್ (28) ಹಾಗೂ ಆರ್ ಕುಮಾರ್ (28) ಬಂಧಿತ ಆರೋಪಿಗಳು.ಬಂಧಿತರಿಂದ ಒಂದು ಲಾಂಗ್, ಮಚ್ಚು , ಎರಡು ಖಾರದ ಪುಡಿ ಪೊಟ್ಟಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ಸಂಜಯ್ ನಗರದ ಸ್ಮಶಾಣ ರಸ್ತೆಯಲ್ಲಿ ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ದರೋಡೆಗೆ ಸಂಚೂ ರೂಪಿಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿದ್ದರು.ಬಂಧಿತ ಸಂತೋಷ ಎಚ್ಎಎಲ್ ಪೊಲೀಸ್ ಠಾಣೆ ರೌಡಿ ಶೀಟರ್ ಆಗಿದ್ದು, ಈತನ ವಿರುದ್ಧ ಕೊಲೆ ಯತ್ನ, ದರೋಡೆ ಯತ್ನ ಸೇರಿ ಎರಡೆರಡು ಪ್ರಕರಣ ದಾಖಲಾಗಿವೆ. ಇನ್ನು ಶಶಿಕುಮಾರ್ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದ್ದು, ಈತನು ನ್ಯಾಯಾಲಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಭಾಸ್ಕರ್ ಆರ್ ವಿರುದ್ಧ ಮಂಜುನಾಥ್ ನಗರ, ಮಾರತಹಳ್ಳಿ ಹಾಗೂ ಹೆಚ್ ಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಸ್ಟೀಫನ್ ರಾಜ್ ವಿರುದ್ಧ ಮಂಜುನಾಥ್ ನಗರ, ಮಾರತ್ ಹಳ್ಳಿಹಾಗೂ ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಾಗಿದೆ.ಇನ್ನು, ಆರ್ ಕುಮಾರ್ ವಿರುದ್ಧ ಅಶ್ವತ್ ನಗರ, ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.