ಬೋಧನೆ, ಕಲಿಕೆ, ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ: ಕಾರ್ಯಾಗಾರ
Role of Artificial Intelligence in Teaching, Learning, Research: Workshop
ಬೆಳಗಾವಿ 31: ಉನ್ನತ ಶಿಕ್ಷಣ ಮಂತ್ರಾಲಯ, ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ಬೆಂಗಳೂರು, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಡಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಿ.ಎಂ.ಉಷಾ(ಮೇರು) ಯೋಜನೆಯಡಿಯಲ್ಲಿ ಅಪರಾಧಶಾಸ್ತ್ರ ಮತ್ತು ವಿಧಿವಿಜ್ಞಾನ ವಿಭಾಗ, ಗಣಕ ವಿಜ್ಞಾನ ವಿಭಾಗ ಹಾಗೂ ಕೆ.ಎಲ್.ಎಸ್. ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ಸಹಯೋಗತ್ವದಲ್ಲಿ ಒಂದು ದಿನದ ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ವಿಷಯದ ಕುರಿತು ಕಾರ್ಯಾಗಾರವನ್ನು ಕೆ.ಕೆ. ವೇಣುಗೋಪಾಲ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ವಿಶ್ವನಾಥ ಬಿ. ಆವಟಿ, ಡೀನರು, ವಿಜ್ಞಾನ ಮತ್ತು ತಂತ್ರಜ್ಞಾನ ನಿಖಾಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇವರು ವಹಿಸಿದ್ದರು, ಪ್ರೊ. ವ್ಹಿ.ಎಸ್. ಶೀಗೇಹಳ್ಳಿ, ಸಿಂಡಿಕೇಟ್ ಸದಸ್ಯರು, ರಾ.ಚ.ವಿ., ಬೆಳಗಾವಿ,
ಕಾರ್ಯಕ್ರಮದ ಸಂಚಾಲಕರು ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ. ಶಿವಾನಂದ ಗೊರನಾಳೆ, ಇವರು ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿ.ಎಂ.ಉಷಾ(ಮೇರು) ಅಡಿಯಲ್ಲಿ ಸ್ಥಾಪಿಸುತ್ತಿರುವ ಆಧುನಿಕ ಉಪಕರಣಗಳ ಬಗ್ಗೆ, ಂಋ ಪ್ರಯೋಗಾಲಯ, ಲ್ಯಾಂಗ್ವೇಜ್ ಪ್ರಯೋಗಾಲಯ, ಅಡ್ವಾನ್ಸಡ್ ರಿಸರ್ಚ್ ಫ್ಯಾಸಿಲಿಟಿ ಸೆಂಟರ್ ಫಾರ್ ಬೇಸಿಕ್ ಸೈನ್ಸ್ ಅಂಡ್ ಕಂಪ್ಯೂಟೇಶನಲ್ ರಿಸರ್ಚ್ ಸೌಲಭ್ಯದ ಬಗ್ಗೆ ವಿವರಿಸಿದರು.
ಸಂಪನ್ಮೂಲ ವ್ಯಕ್ತಿ ಭರತ ಲೈಲಿ,ಇವರು ನಿಜ ಜೀವನದಲ್ಲಿ ಂಋ ತಂತ್ರಜ್ಞಾನದ ಕುರಿತು ಪರಿಚಯಿಸುತ್ತಾ ಇದು ಯಾವ ರೀತಿಯಲ್ಲಿ ಬಳಕೆಯಾಗುತ್ತಿದೆ ಎಂದು ಪ್ರೆಸೆಂಟೇಶನ್ ಮೂಲಕ ಉದಾಹರಣೆ ನೀಡುತ್ತಾ ವಿವರಿಸಿದರು. ಅಲ್ಲದೇ ಂಋ ನ ಅನುಕೂಲತೆಗಳು, ಮಿತಿಗಳ ಬಗ್ಗೆ ಕೃತಕ ಬುದ್ಧಿಮತ್ತೆ ತಂತ್ರಾಂಶವನ್ನು ಶೈಕ್ಷಣಿಕ ಮತ್ತು ಸಂಶೋಧನೆ, ಕೃಷಿ, ಆರೋಗ್ಯ ಮತ್ತು ತಾಂತ್ರಿಕ ಉಪಕರಣಗಳ ಉತ್ಪಾದನಾ ಘಟಕಗಳಲ್ಲಿ ಯಾವ ರೀತಿಯಲ್ಲಿ ಬಳಕೆಯಾಗುತ್ತಿದೆ ಎಂದು ವಿವರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 