ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ: ಪಟೇಲ

ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ: ಪಟೇಲ  Role of teachers is important in building a better society: Patel

ಕೊಪ್ಪಳ 8 : ಒಳ್ಳೆಯ ಶಿಕ್ಷಕ ಸಮಾಜದ ನಿರ್ಮಾಪಕ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಪಟೇಲ್ ಹೇಳಿದರು, 

ಅವರು ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ  ಸಾಕ್ಷರತಾ ಇಲಾಖೆ ಏರಿ​‍್ಡಸಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು, ಮುಂದುವರಿದು ಮಾತನಾಡಿದ ಅವರು ಇಂದಿನ ಮಕ್ಕಳೇ ಈ ನಾಡಿನ ಬಾವಿ ಪ್ರಜೆಗಳಾಗಿದ್ದು ಮಕ್ಕಳ ಭವಿಷ್ಯ ಉಜ್ವಲ ಗೊಳಿಸುವಲ್ಲಿ ಶಿಕ್ಷಕರು ಪ್ರಾಮಾಣಿಕವಾದಂತ ಪ್ರಯತ್ನ ಮಾಡುತ್ತಾರೆ, ಶಿಕ್ಷಕರ ಬಗ್ಗೆ ಪ್ರತಿಯೊಬ್ಬರು ಅಪಾರವಾದ ಗೌರವ ಹೊಂದಿರುತ್ತಾರೆ ಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾವುಗಳು ಜೀವನ ಸಾಗಿಸಬೇಕಾಗಿದೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕಾಗಿರೋದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಪವಿತ್ರ ಕುರಾನಿನಲ್ಲಿ ಅವತೀರಣ ಗೊಂಡ ಮೊದಲ ಅಕ್ಷರ ಕೂಡ ಓದು ಎಂಬ ಅಕ್ಷರ ವಾಗಿದೆ ಹಾಗಾಗಿ ನಾವು ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು ಶಿಕ್ಷಣ ರಂಗದಲ್ಲಿಯೇ ಎಲ್ಲಾ ಕ್ಷೇತ್ರದ ಅಭಿವೃದ್ಧಿ ಅಡಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.

ಸಮಾರಂಭದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್ ಕೊಪ್ಪಳ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತ ನಗರಸಭೆ ಸದಸ್ಯರಾದ ಮುತ್ತಣ್ಣ ಕುಷ್ಟಗಿ,ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಜುಮಣ್ಣನವರ್, ಶಾಲಾ ಉಪನಿರ್ದೇಶಕ ಸೋಮಶೇಖರ್ ಗೌಡ ಪಾಟೀಲ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನುಮಂತಪ್ಪ ಹೆಚ್, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಶರಣಬಸನಗೌಡ ಪಾಟೀಲ್ ಕಾರ್ಯದರ್ಶಿ ಮಂಜುನಾಥ್, ಸಹ ಕಾರ್ಯದರ್ಶಿ ಬಸವರಾಜ್ ಕೊಮಲಾಪುರ, ತಾಲೂಕ ಅಧ್ಯಕ್ಷ ಹೊಳಿಬಸಯ್ಯ ಕೆ ಎಂ, ಕಾರ್ಯದರ್ಶಿ ಬಾಳಪ್ಪ ಕಾಳೆ, ಮತ್ತು ಪ್ರಾಣೇಶ್ ಪೂಜಾರಿ , ಪರಸಪ್ಪ ಕಮಲಿ, ದೇವರಾಜ್ ಎ .ಎಸ್‌. ಉರ್ದು ಸಂಘದ ಜಿಲ್ಲಾ ಅಧ್ಯಕ್ಷ ನಫೀಸ್ ಖಾನ್ ಪಠಾಣ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು ಶಿಕ್ಷಕರ ಸಂಘದ ವಿವಿಧ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.