ಚುನಾವಣಾ ಕಣದಿಂದ ಹಿಂದೆ ಸರಿದ ರೋಷನ್ ಬೇಗ್ :ಬಿಜೆಪಿ, ಜೆಡಿಎಸ್ ನಿಂದ ಟಿಕೆಟ್ ತಪ್ಪಿದ್ದಕ್ಕೆ ಬೇಸರ
ಬೆಂಗಳೂರು,ನ 18 : ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.ಬಿಜೆಪಿ ಪಕ್ಷದಿಂದ ಟಿಕೆಟ್ ಕೈತಪ್ಪಿದ್ದರಿಂದ ಬೇಗ್ ಅವರು ಅತಂತ್ರರಾಗಿದ್ದರು. ಐಎಂಎ ಹಗರಣದಲ್ಲಿ ಬೇಗ್ ಹೆಸರು ತಳುಕು ಹಾಕಿಕೊಂಡಿದ್ದ ರಿಂದ ಬಿಜೆಪಿ ಟಿಕೆಟ್ ನೀಡಿಲ್ಲ ಎನ್ನಲಾಗುತ್ತಿದೆ ಸಾಮಾಜಿಕ ಜಾಲತಾಣದಲ್ಲಿ ಶಿವಾಜಿನಗರ ಜನತೆಗೆ ಕೃತಜ್ಞತೆ ಸಲ್ಲಿಸಿರುವ ರೋಷನ್ ಬೇಗ್ ಐಎಂಎ ಪ್ರಕರಣದಿಂದ ಚುನಾವಣೆಯಲ್ಲಿ ಹಿನ್ನಡೆ ಆಗುವ ಆತಂಕದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದು,ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯುವ ತೀರ್ಮಾನವನ್ನು ಕೈಕೊಂಡಿದ್ದಾರೆ.ನಿನ್ನೆ ಅನರ್ಹ ಶಾಸಕ ರೋಷನ್ ಬೇಗ್ ಬೆಂಬಲಿಗರ ಸಭೆ ನಡೆಸಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ನಿಂದ ದೂರವಾಗಿ,ಬಿಜೆಪಿಗೆ ಬೇಡವಾಗಿ ಅತಂತ್ರ ಸ್ಥಿತಿಯಲ್ಲಿದ್ದ ರೋಷನ್ ಬೇಗ್ ಭಾನುವಾರ ಹಾಸನಕ್ಕೆ ತೆರಳಿ ಜೆಡಿಎಸ್ ನಾಯಕರ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದರು.ಆದರೆ ಜೆಡಿಎಸ್ ಟಿಕೆಟ್ ಸಿಗದಿದ್ದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದರು ಎನ್ನಲಾಗಿದೆ. ಆದರೆ ಅಂತಿಮ ಕ್ಷಣದಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಬಿಜೆಪಿ ಅಭ್ಯರ್ಥಿಗೆ ಗೆಲುವಿಗೆ ಬೆಂಬಲಿಸುವಂತೆ ಬಿಜೆಪಿ ವರಿಷ್ಠರು ಮನವೊಲಿಸಿದ್ದಾರೆ ಎನ್ನಲಾಗಿದೆ. ಐಎಂಎ ಪ್ರಕರಣ,ರುದ್ರೇಶ್ ಹತ್ಯೆ ಪ್ರಕರಣಗಳು ಅವರಿಗೆ ಉರುಳಾಗಿರುವ ಹಿನ್ನೆಲೆ ರೋಷನ್ ಬೇಗ್ ಪ್ರಕರಣಗಳಿಂದ ಹೊರ ಬರಬರುವ ತನಕ ಯಾವುದೇ ರಾಜಕೀಯ ಪಕ್ಷಗಳು ಅವರನ್ನು ಹತ್ತಿರ ಸೇರಿಸಕೊಳ್ಳಲು ಹಿಂದೇಟು ಹಾಕಿವೆ.ರಾಜಕೀಯ ಭವಿಷ್ಯ ಹಾಗೂ ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ ಹಿನ್ನಲೆಯಲ್ಲಿ ಪಕ್ಷೇತರನಾಗಿ ಕಣಕ್ಕಿಳಿಯುವಂತೆ ಬೆಂಬಲಿಗರು ಒತ್ತಾಯಿಸಿದ್ದರು. ಆದರೆ ಇಂದು ಫೇಸ್ ಬುಕ್ ಪೇಜ್ ನಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಪ್ರಕಟಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.ಬೆಂಬಲಿಗರು ಕಾರ್ಯಕರ್ತರು,ಅಭಿಮಾನಿಗಳಿಗೆ ರೋಷನ್ ಬೇಗ್ ವಂದನೆಗಳನ್ನು ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 